ಸಹಕಾರ ಸಂಘಗಳ ತಿದ್ದುವಡಿ ವಿಧೇಯಕ ಅಂಗೀಕಾರ: ಅಭಿನಂದನೆ
ಮಧುಗಿರಿ, ಜು. ೨೭- ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ೨೦೨೪ ವಿಧಾನಪರಿಷತ್ತಿನಲ್ಲಿ ಅಂಗೀಕರಿಸಿ ಜಾರಿಗೆ ತಂದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ರವರನ್ನು ಅಭಿನಂದಿಸುವುದಾಗಿ ರಾಜ್ಯ ಕೆಎಂಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು ತಿಳಿಸಿದ್ದಾರೆ.
ಅದರಲ್ಲೂ ವಿಶೇಷವಾಗಿ ತಳ ಸಮುದಾಯಗಳಿಗೆ ಮೀಸಲಾತಿ ಜಾರಿಗೆ ತಂದು. ಅದರಲ್ಲಿ ಮಹಿಳೆಯರಿಗೂ ಅವಕಾಶ ಕಲ್ಪಿಸಿದ ಸಹಕಾರ ಸಚಿವದ ಕೆ.ಎನ್. ರಾಜಣ್ಣ ರವರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸುವುದಾಗಿ ತಿಳಿಸಿದ ಅವರು, ಇದರಿಂದ ತಳ ಸಮುದಾಯಕ್ಕೆ ಸೇರಿದವರು ಮತ್ತು ಮಹಿಳೆಯರು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಅನುಕೂಲವಾಗುತ್ತದೆ. ಈ ಸಹಕಾರ ಕಾಯ್ದೆಗೆ ತಿದ್ದುಪಡಿ ಮಾಡಿ ತಳ ಸಮುದಾಯಗಳಿಗೆ ಅನುಕೂಲ ಕಲ್ಪಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ರವರನ್ನು ಮಧುಗಿರಿಯಲ್ಲಿ ವಿವಿಧ ಸಮುದಾಯಗಳ ವತಿಯಿಂದ ಬೃಹತ್ ಅಭಿನಂದನಾ ಸಮಾರಂಭ ಏರ್ಪಡಿಸುವುದಾಗಿ ಮತ್ತು ಮಧುಗಿರಿ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೆರಸಬಾರದು. ಚುನಾವಣೆ ನಡೆಸಬಾರದು ಎಂಬ ಉದ್ದೇಶದಿಂದ ತಾಲ್ಲೂಕಿನ ಬಹಳಷ್ಟು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಚುನಾವಣೆ ನಡೆಸದೆ ಅವಿರೋಧ ಆಯ್ಕೆಗೆ ಶ್ರಮಿಸಿದ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ಅವಿರೋಧ ಆಯ್ಕೆಗೆ ಶ್ರಮಿಸಿದ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗು ಸಹಕಾರ ಇಲಾಖೆಯ ವಿವಿಧ ಅಧಿಕಾರಿ ವರ್ಗಕ್ಕೂ ಹಾಗೂ ಹಾಲು ಉತ್ಪಾದಕ ಸಂಘಗಳ ಕಾರ್ಯದರ್ಶಿಗಳಿಗೂ ಮತ್ತು ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಸಹಕಾರ ಸಂಘಗಳ ಸದಸ್ಯರುಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.