ಮಾಡನಾಯಕನಹಳ್ಳಿ: ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.27; ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಂಗಳವಾರ ಚಿಕ್ಕಗೊಂಡನಹಳ್ಳಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು.ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶೈಲಜಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಲಿತಾ, ಮಾಡನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎನ್.ಆರ್.ಶಶಿಧರ್, ಎಸ್‌ಡಿಎಂಸಿ ಅಧ್ಯಕ್ಷ ಸಿ.ಹನುಮಂತಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಟಿ.ಲಿಂಗರಾಜ್, ಗ್ರಾಮ ಪಂಚಾಯಿತಿ ಸದಸ್ಯ ಲಿಂಗರಾಜ್ ಎಸ್‌ಡಿಎಂಸಿ ಸದಸ್ಯರು ಹಾಗೂ ಚಿಕ್ಕಗೊಂಡನಹಳ್ಳಿ ಕ್ಲಸ್ಟರ್‌ನ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.