ಡೆಂಗ್ಯೂ ಜ್ವರ ನಿರ್ಲಕ್ಷೆ ಬೇಡ: ಸ್ವಚ್ಛತೆ ಕಡೆ ಗಮನಹರಿಸಿ, ಸೊಳ್ಳೆಗಳ ತಾಣ ನಾಶ ಮಾಡಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.26; ದಿನೇ ದಿನೇ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಡೆಂಗ್ಯೂ ಜ್ವರದ ನಿರ್ಲಕ್ಷೆ ಬೇಡ. ಸ್ವಚ್ಛತೆ ಕಡೆ ಗಮನಹರಿಸಿ, ಸೊಳ್ಳೆಗಳ ಉತ್ಪತ್ತಿ ತಾಣ ನಾಶ ಮಾಡಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸಲಹೆ ನೀಡಿದರು. ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ಗುಂಪು ಸಭೆಯಲ್ಲಿ ಅವರು ಮಾತನಾಡಿದರು.ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮುದ್ದಾಪುರ ಹೊಸಹಟ್ಟಿ ಗ್ರಾಮದಲ್ಲಿ 2 ಪ್ರಕರಣಗಳು ದೃಢಪಟ್ಟಿದ್ದು, ಡೆಂಗ್ಯೂ ಹಾಟ್‍ಸ್ಪಾಟ್ ಎಂದು ಗುರುತಿಸಲಾಗಿದೆ. ಮನೆ ಮನೆ ಭೇಟಿ ಲಾರ್ವಾ ಸಮೀಕ್ಷೆ, ಜ್ವರ ಸಮೀಕ್ಷೆ, ಗುಂಪು ಸಭೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.