ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಜು.26:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ರಾಯಚೂರಿನಿಂದ ರಸ್ತೆ ಮೂಲಕ ಜುಲೈ 28 ರಂದು ಭಾನುವಾರ ರಾತ್ರಿ 7 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 29 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಕಲಬುರಗಿ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜುಲೈ 30 ರಂದು ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.