ರಾಜ್ಯದ ಸಣ್ಣ ಕೈಗಾರಿಕೆ ಸಚಿವರ ಪ್ರವಾಸ
ಕಲಬುರಗಿ:ಜು.26:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಇವರು ಬೆಂಗಳೂರಿನಿAದ ವಿಮಾನದ ಮೂಲಕ ಜುಲೈ 27 ರಂದು ಶನಿವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಶಹಾಪೂರಕ್ಕೆ ಪ್ರಯಾಣಿಸಿ, ಶಹಾಪೂರ ಮತ್ತು ಯಾದಗಿರಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮರಳಿ ರಾತ್ರಿ 10.30 ಗಂಟೆಗೆ ಯಾದಗಿರಿಯಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 28 ರಂದು ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಗೆ ಕಲಬುರಗಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಜುಲೈ 29 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಶಹಾಪೂರ ತಾಲೂಕಿನ ಭೀಮರಾಯನಗುಡಿಗೆ ಪ್ರಯಾಣಿಸಿ, ಭೀಮರಾಯನಗುಡಿ ಮತ್ತು ಕೆಂಭಾವಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4.30 ಗಂಟೆಗೆ ಮರಳಿ ಕೆಂಭಾವಿಯಿAದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 30 ರಂದು ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಯಾದಗಿರಿಗೆ ಪ್ರಯಾಣಿಸಿ, ಯಾದಗಿರಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವವಹಿಸಿ, ಮರಳಿ ಸಂಜೆ 6.30 ಗಂಟೆಗೆ ಯಾದಗಿರಿಯಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.