ತಾಜಬಾವಡಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ
ವಿಜಯಪುರ, ಜು. 26:ನಗರದ ತಾಜಬಾವಡಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ಶುಕ್ರವಾರ ನಡೆಯಿತು. ಅತಿಕ್ರಮಣ ಮಾಡಿಕೊಂಡಿದ್ದ ಮನೆಗಳು, ಅಂಗಡಿಗಳನ್ನು ತೆರವು ಮಾಡಲಾಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರ ಆದೇಶದ ಮೇರೆಗೆ ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ಜೆಸಿಬಿ ಮೂಲಕ ಮಾಡಲಾಯಿತು.
ನೋಡು ನೋಡುತ್ತಿದ್ದಂತೆ ಅಕ್ರಮವಾಗಿ ಕಟ್ಟಿದ ಹತ್ತಕ್ಕೂ ಹೆಚ್ಚು ಅಂಗಡಿಗಳನ್ನು ನೆಲಸಮಗೊಂಡವು. ಈ ವೇಳೆ ಅಹಿತಕರ ಘಟನೆಗಳು ಆಗದಂತೆ ಗಾಂಧಿಚೌಕ್ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.