ಅಂಬೇಡ್ಕರ್ ಭವನದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿಫಲ : ಪ್ರತಾಪ ಚಿಕ್ಕಲಕಿ ಆಕ್ರೋಶ
ವಿಜಯಪುರ,ಜು.26: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಜಾಗಕ್ಕೆ ಸಂಬAಧಿಸಿದ ಸಮಸ್ಯೆಯ ಕುರಿತು ಸುದೀರ್ಘವಾದ ಹೋರಾಟ ಕೈಗೊಂಡರೂ ಕೂಡ ಜಾಗದ ಸಮಸ್ಯೆಯನ್ನು ಪರಿಹರಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದಲಿತ ಮುಖಂಡ ಪ್ರತಾಪ ಚಿಕ್ಕಲಕಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನದ ಜಾಗಕ್ಕೆ ಖಾಸಗಿ ವ್ಯಕ್ತಿಗಳು ತಕರಾರರು ತಗೆಯುತ್ತಿರುವ ಬಗ್ಗೆ ತಿಂಗಳಗಳ ಹಿಂದೆಯೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಅನುಮಾನ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಅಂಬೇಡ್ಕರ್ ಭವನದ ಜಾಗಕ್ಕೆ ಹೋಗಲು ಖಾಸಗಿ ವ್ಯಕ್ತಿಗಳು ನಿರ್ಮಿಸಿದ ತಡೆಗೋಡೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಸವಕುಮಾರ ಕಾಂಬಳೆ, ಬಸವರಾಜ ಕುಬಕಡ್ಡಿ, ಪ್ರದೀಪ ಚಲವಾದಿ ಮುಂತಾದವರು ಇದ್ದರು.