ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ: ಬಸವರಾಜ ಅಂಗಡಿ
ವಿಜಯಪುರ,ಜು.26
ಶಿಕ್ಷಣದಲ್ಲಿ ಮುಂದುವರೆಯಬೇಕಾದರೆ ನಮಗೆ ಆರ್ಥಿಕವಾಗಿ ಸಹಾಯ ಬೇಕು. ಅದರಂತೆ ಸರ್ಕಾರದÀ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತ್ತು ಇನ್ನಿತರ ಇಲಾಖೆಗಳ ಸಂಬAಧಿಸಿದ ಯೋಜನೆಗಳು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತುಂಬಾ ಸಹಾಯಕವಾಗಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಜಯಪುರ ತಾಲೂಕು ಅಧಿಕಾರಿ ಬಸವರಾಜ ಅಂಗಡಿ ಹೇಳಿದರು.
ನಗರದ ಬಿ.ಎಲ್.ಡಿ. ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ, ಓಬಿಸಿ ಮತ್ತು ಅಲ್ಪಸಂಖ್ಯಾತರ ಸೆಲ್ ವತಿಯಿಂದ ಅಯೋಜಿಸಲಾದ ‘ಒಬಿಸಿ ಮತು ್ತಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕಲ್ಯಾಣ ಯೋಜನೆಗಳು ಮತ್ತು ಉದ್ಯಮಶೀಲತೆ’ ಕಾರ್ಯಾಗಾರದಲ್ಲಿ ಮಾತನಾಡಿದರು.
ಹಿಂದುಳಿದ, ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹತ್ತು ಹಲವು ಯೋಜನೆಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅಲ್ಲದೆ ವಿದ್ಯಾರ್ಥಿಗಳ ವಸತಿ ವ್ಯವಸ್ಥೆಗೆ ಹಾಸ್ಟೇಲ್ ಕಲ್ಪಿಸಲಾಗಿದೆ. ಉತ್ತಮ ಅಂಕಗಳನ್ನು ಪಡೆದುಕೊಂಡು ಹಾಸ್ಟೇಲ್ ಸೌಲಭ್ಯ ಪಡೆದುಕೊಂಡು ಉನ್ನತ ವ್ಯಾಸಂಗಕ್ಕೆ ಮುಂದಾಗಬೇಕು ಮತ್ತು ವಿದ್ಯಾರ್ಥಿವೇತನವು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಉತ್ತೇಜನ ಒದಗಿಸುವ ಪ್ರಮುಖ ಯೋಜನೆಯಾಗಿದೆ. ಇದಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಗೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಹಿಂದುಳಿದ ವರ್ಗಗಳ ಇಲಾಖೆಗೆ ಸಂಬAಧಿಸಿದ ಯೋಜನೆಗಳ ಬಗ್ಗೆ ಸಮಗ್ರವಾಗಿ ಮಾಹಿತಿಯನ್ನು ಒದಗಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವಿಜಯಪುರ ಜಿಲ್ಲಾ ವ್ಯವಸ್ಥಾಪಕ ಅಧಿಕಾರಿ ಎಮ್.ಎ ಶೇಖ ಮಾತನಾಡಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳಿವೆ. ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಸಿಇಟಿ, ನೀಟ್, ಅರಿವು ಲೋನ್ ಯೋಜನೆ, ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಐಎಎಸ್, ಕೆಎಎಸ್ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಇಂತಹ ಹಲವಾರು ವೃತ್ತಿಪರ ಯೋಜನೆಗಳು ಸರ್ಕಾರವುÀ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಹತ್ತು ಹಲವಾರು ಯೋಜನೆಗಳು ಸರ್ಕಾರ ಸೃಷ್ಟಿಸಿದೆ. ಈ ಯೋಜನೆಗಳನ್ನು ಸದುಪಯೋಗ ಪಡೆಸಿಕೊಂಡು ಉನ್ನತ ವ್ಯಾಸಂಗಕ್ಕೆ ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಆರ್.ಎಂ. ಮಿರ್ದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಹಲವಾರು ಯೋಜನೆಗಳಿವೆ. ವಿದ್ಯಾರ್ಥಿಗಳ ಭವಿಷ್ಯತ್ತಿಗೆ ಉತ್ತೇಜನ ಒದಗಿಸುವ ಕಾರ್ಯ ಮಾಡುತ್ತಿವೆ. ಇಂತಹ ಯೋಜನೆಗಳ ಸೌಲಭ್ಯ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ ನಿರ್ದೇಶಕ Àಡಾ. ಪಿ.ಎಸ್. ಪಾಟೀಲ, ಓಬಿಸಿ ಮತ್ತು ಅಲ್ಪಸಂಖ್ಯಾತರ ಸೆಲ್ ಮುಖ್ಯಸ್ಥ ಡಾ. ಶೇಖರ ಲಮಾಣಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಆಸೀಫ್ ಇನಾಮದಾರ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ಸಿದ್ದಲಿಂಗ ಮತ್ತು ಅನಿಲ ಹಾಗೂ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ವೇಳೆಯಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಮಲಿಕ್ ಜಮಾದಾರ ಸ್ವಾಗತಿಸಿ ಪರಿಚಯಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಡಾ. ಎಂ.ಬಿ. ಪಾಟೀಲ ನಿರೂಪಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರಭಾವತಿ ತಳವಾರ ವಂದಿಸಿದರು.