ಉಚಿತ ಹೃದ್ರೋಗ ತಪಾಸಣಾ ಶಿಬಿರಕ್ಕೆ ಚಾಲನೆ
ಸಂಜೆವಾಣಿ ನ್ಯೂಸ್
ನಂಜನಗೂಡು: ಸೆ.29:- ನಗರದ ಗುರುಭವನದಲ್ಲಿ ಗೌತಮ ಬುದ್ಧ ಸಾಮಾಜಿಕ ಸೇವಾ ಟ್ರಸ್ಟ್, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸೇವಾ ಟ್ರಸ್ಟ್ ಹಾಗೂ ನಾರಾಯಣ ಆಸ್ಪತ್ರೆ ಮೈಸೂರು ಇವರ ಸಹಯೋಗದಲ್ಲಿ ಉಚಿತ ಹೃದ್ರೋಗ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಗೌತಮ ಬುದ್ಧ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಭಿನಾಗಭೂಷಣ್ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶಿಬಿರಕ್ಕೆ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಚಾಲನೆ ನೀಡಿದರು.
ವೇದಿಕೆ ಕಾರ್ಯಕ್ರಮವನ್ನು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಹೆಸರಾಂತ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ಚಿಕಿತ್ಸೆ ಪಡೆಯಲು ತೊಂದರೆಯಾಗುತ್ತದೆ . ಎಂದು ಗೌತಮ್ ಬುದ್ಧ ಸಾಮಾಜಿಕ ಸೇವಾ ಟ್ರಸ್ಟ್ ಮತ್ತು ಅಬ್ದುಲ್ ಕಲಾಂ ಸೇವಾ ಟ್ರಸ್ಟ್ ಈ ಕಾರ್ಯಕ್ರಮವನ್ನು ಆ ಯೋಜನೆ ಮಾಡಿದ್ದಾರೆ. ಸಾರ್ವಜನಿಕರು ಇದರ ಉಪಯೋಗಪಡಿಸಿಕೊಳ್ಳಬೇಕು. ಇಂತಹ ಆರೋಗ್ಯ ಚಿಕಿತ್ಸೆ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಸಬೇಕು.
ಹೃದಯ ಸಂಬಂಧಿ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಗೌತಮ ಬುದ್ಧ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಭಿನಾಗಭೂಷಣ್ ಮಾತನಾಡಿ, ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಮ್ಮ ಟ್ರಸ್ಟ್ ವತಿಯಿಂದ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ನೀಡಿ ಪ್ರಮಾಣಪತ್ರ ವಿತರಣೆ ಮಾಡಿದ್ದೇವೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸೇವೆ ಸಲ್ಲಿಸಬೇಕೆಂದು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ.
ಮನುಷ್ಯನಿಗೆ ಹುಟ್ಟು ಸಾವು ಸಹಜವಾಗಿದೆ. ಆದರೆ, ಅತಿ ಹೆಚ್ಚಾಗಿ ಹೃದಯಘಾತದಿಂದ ಸಾಕಷ್ಟು ಸಾವು ನೋವುಗಳಾಗಿವೆ. ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ್ ಮತ್ತು ಮಾಜಿ ಸಂಸದರಾಗಿದ್ದ ದಿವಂಗತ ಆರ್.ಧ್ರುವನಾರಾಯಣ್ ರವರು ಕೂಡ ಹೃದಯಘಾತದಿಂದ ಮೃತಪಟ್ಟಿದ್ದರು. ಇದನ್ನು ಮನಗಂಡು ನಾವು ಸಾರ್ವಜನಿಕರಿಗೆ ಉಚಿತವಾಗಿ ಹೃದ್ರೋಗ ತಪಾಸಣೆ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಇದನ್ನು ಸಾರ್ವಜನಿಕ ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಗೌತಮ ಬುದ್ಧ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಭಿನಾಗಭೂಷಣ್, ಅಬ್ದುಲ್ ಕಲಾಂ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೈಯದ್ ಉಸೆನ್,
ಡಾ.ಪೂಜಾ, ಡಾ.ವನಜಾ, ಪ್ರತಿಧ್ವನಿ ವೇದಿಕೆಯ ಅಧ್ಯಕ್ಷ ತ್ರಿನೇಶ್, ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ವಿಜಯಕುಮಾರ್, ಟ್ರಸ್ಟ್ ಸದಸ್ಯರಾದ ಪ್ರಶಾಂತ್ ಕುಮಾರ್, ಸ್ಪರ್ಶ, ರಾಜೇಂದ್ರ , ಜಯರಾಮ್, ಮಹೇಶ್, ವಿನಯ್ ಸೇರಿದಂತೆ ಹಲವರು ಭಾಗವಹಿಸಿದ್ದರು.