ಖಾಸಗಿ, ಕನ್ನಡ ಶಾಲೆಗಳ ಉಳಿವಿಗೆ ನಿಯಮ ಸಡಿಲಿಕೆಗೆ ಒತ್ತಾಯ ಮಳೆಯಲ್ಲೇ ಖಾಸಗಿ ಶಾಲೆಗಳ ಪ್ರತಿಭಟನೆ
ಬೀದರ್: ಜು.26:ಖಾಸಗಿ ಶಾಲೆಗಳ ಉಳಿವಿಗಾಗಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಪದಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕಲ್ಯಾಣ ರ‍್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ನೇತೃತ್ವದಲ್ಲಿ ಮಳೆಯಲ್ಲೇ ಕೈಯಲ್ಲಿ ಕೊಡೆ ಹಿಡಿದು ಘೋಷಣೆ ಕೂಗುತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶ್ರೀ ಸಾಯಿ ರ‍್ಶ ಶಾಲೆ ಆವರಣದಿಂದ ಜನರಲ್ ರ‍್ಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ರ‍್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.
ಶಾಲೆ ಅನುಮತಿ ನವೀಕರಣ ಸರಳಗೊಳಿಸಬೇಕು. 15 ರಿಂದ 20 ರ‍್ಷಗಳಿಂದ ನಡೆಸುತ್ತಿರುವ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಬಡ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿದ್ದ ಆರ್.ಟಿ.ಇ ಮರು ಜಾರಿಗೊಳಿಸಬೇಕು. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ರ‍್ತಿ ಮಾಡಬೇಕು. ರ‍್ಕಾರದಿಂದ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುತ್ತಿರುವುದನ್ನು ಕೈ ಬಿಟ್ಟು ರ‍್ಕಾರಿ ಕನ್ನಡ ಶಾಲೆಗಳನ್ನು ಉಳಿಸಬೇಕು. ಶಾಲಾ ಕಟ್ಟಡದ ಕರದಲ್ಲಿ ರಿಯಾಯಿತಿ ಕಲ್ಪಿಸಬೇಕು. ಕಲ್ಯಾಣ ರ‍್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಕಾಯ್ದೆಯಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಅನಧಿಕೃತ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿದರು.
ತಡೋಳಾದ ರಾಜೇಶ್ವರ ಶಿವಾರ‍್ಯ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಮುಚಳಂಬದ ಪ್ರಣವಾನಂದ ಸ್ವಾಮೀಜಿ, ಕಲ್ಯಾಣ ರ‍್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಗೌರವಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ, ಅಧ್ಯಕ್ಷ ರಾಜೇಂದ್ರ ಮಣಗೇರಿ, ಪ್ರಧಾನ ರ‍್ಯರ‍್ಶಿ ಗುರುನಾಥ ರೆಡ್ಡಿ, ಸಂಘಟನಾ ರ‍್ಯರ‍್ಶಿ ಮಹಮ್ಮದ್ ಸಲಾಹುದ್ದೀನ್ ಫರಾನ್, ಬಸವ ರ‍್ಥ ವಿದ್ಯಾಪೀಠದ ಗುಂಡಯ್ಯ ರ‍್ಥ, ಜ್ಞಾನಸುಧಾ ವಿದ್ಯಾಲಯದ ಅಧ್ಯಕ್ಷೆ ರ‍್ಣಿಮಾ ಜಿ,
ಸಂಘದ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಅಕ್ಷಯ್ ಮುದ್ದಾ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಧನರಾಜ ದೊಡ್ಡಮನಿ, ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಹುಡಗಿಕರ್, ಔರಾದ್ ತಾಲ್ಲೂಕು ಅಧ್ಯಕ್ಷ ಸಂಜೀವಕುಮಾರ ಶೆಟಕಾರ್, ಬೀದರ್ ತಾಲ್ಲೂಕು ಅಧ್ಯಕ್ಷ ಸಂದೀಪ್ ಶೆಟಕಾರ್, ಕಮಲನಗರ ತಾಲ್ಲೂಕು ಅಧ್ಯಕ್ಷ ಸಂಜುಕುಮಾರ ಕಂಠಾಳೆ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಸೈಯದ್ ಅಹಮ್ಮದ್ ಇದ್ದರು.
ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ: ಎಚ್ಚರಿಕೆ
ಬೀದರ್: ರಾಜ್ಯ ರ‍್ಕಾರ ತಕ್ಷಣ ಅನುದಾನ ರಹಿತ ಖಾಸಗಿ ಶಾಲೆಗಳ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟದ ನೇತೃತ್ವ ವಹಿಸಿದ್ದ ಕಲ್ಯಾಣ ರ‍್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಗೌರವಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಎಚ್ಚರಿಸಿದರು.
ಪ್ರತಿಭಟನೆ ಅಂಗವಾಗಿ ನಗರದಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಂಘದ ಎಂಟು ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ಕಲ್ಯಾಣ ರ‍್ನಾಟಕದ ಏಳು ಜಿಲ್ಲೆಗಳ 42 ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ತಡೋಳಾದ ರಾಜೇಶ್ವರ ಶಿವಾರ‍್ಯ, ಮುಚಳಂಬದ ಪ್ರಣವಾನಂದ ಸ್ವಾಮೀಜಿ, ಭಾಲ್ಕಿಯ ಗುರುಬಸವ ಪಟ್ಟದ್ದೇವರು ರ‍್ಕಾರ ಖಾಸಗಿ ಶಾಲೆಗಳ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ರ‍್ಕಾರಿ- ಖಾಸಗಿ ಶಾಲೆಗಳ ಮಧ್ಯೆ ತಾರತಮ್ಯ ಮಾಡಬಾರದು. ಕನ್ನಡ ಶಾಲೆಗಳನ್ನು ಉಳಿಸಲು ನಿಯಮ ಸಡಿಲಿಸಬೇಕು ಎಂದು ಆಗ್ರಹಿಸಿದರು.
ಕಲ್ಯಾಣ ರ‍್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೇರಿ, ಬಸವರ‍್ಥ ವಿದ್ಯಾಪೀಠದ ಗುಂಡಯ್ಯ ರ‍್ಥ ಮಾತನಾಡಿದರು.