ಪ್ರಧಾನಮಂತ್ರಿ ಪೋಷಣಾ ಶಕ್ತಿ ಯೋಜನೆಯಿಂದ ಅಪೌಷ್ಠಿಕತೆ ನಿವಾರಣೆ
ಗುಳೇದಗುಡ್ಡ: ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಪೋಷಣಾ ಶಕ್ತಿ ಯೋಜನೆಯಡಿ ಅಂಗನವಾಡಿ, ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ವಿತರಿಸಲಾಗುತ್ತಿದ್ದು, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಅವರ ದೈಹಿಕ, ಮಾನಸಿಕ ಬೆಳವಣಿಗೆಗೆ ಈ ಯೋಜನೆಯಿಂದ ಉತ್ತೇಜನ ನೀಡಲಾಗುತ್ತಿದೆ ಎಂದು ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ರಾಮಚಂದ್ರ ಮೈತ್ರಿ ಹೇಳಿದರು.
ಅವರು ಇತ್ತೀಚೆಗೆ ಪಟ್ಟಣದ ಸರಸ್ವತಿ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತಿ ಹಾಗೂ ಎಂ.ಎಚ್. ಆಡಿನ ಪ್ರೌಢಾಶಲೆಯ ವತಿಯಿಂದ ಹಮ್ಮಿಕೊಂಡ ಕರ್ನಾಟಕ ಯೋಜನೆ ಸಾಮಾಜಿಕ ಪರಿಶೋಧನೆ ಸಮಾರಂಭದಲ್ಲಿ ಮಾತನಾಡಿದರು.
ಮುತ್ತಣ್ಣ ಓಲೇಕಾರ ಕಾರ್ಯಕ್ರಮ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಸಂಸ್ಥೆಯ ಖಜಾಂಚಿ ಪಿ.ಎನ್.ಪವಾರ, ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ತಾಂಡೂರ, ಸದಸ್ಯ ಸಂಗಣ್ಣ ಹುನಗುಂದ, ಪರಶುರಾಮ ಬಂತಲ, ಅಕ್ಷತಾ ಪಾಟೀಲ, ಎ.ಎನ್. ಸೂಳಿಕೇರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.