ಸಮನ್ವಯ ಸಮಿತಿ ಸಭೆ
ಗದಗ,ಜು೨೬: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್‌ನಲ್ಲಿ ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಶಿಲ್ದಾರು, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.