ಸ್ವಾತಂತ್ರೊö್ಯÃತ್ಸವ ದಿನಾಚರಣೆ ಪೂರ್ವಭಾವಿ ಸಭೆ

ಗದಗ,ಜು೨೫ : ಜಿಲ್ಲೆಯಲ್ಲಿ ಅಗಸ್ಟ ೧೫ ರಂದು ಸ್ವಾತಂತ್ರೊö್ಯÃತ್ಸವ ದಿನಾಚರಣೆಯನ್ನು ಶಿಸ್ತು ಹಾಗೂ ಸಂಭ್ರಮದಿಂದ ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರೊö್ಯÃತ್ಸವದ ಹಿಂದಿನ ದಿನ ಅಗಸ್ಟ ೧೪ ಹಾಗೂ ೧೫ ರಂದು ಎರಡು ದಿವಸಗಳ ಕಾಲ ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳು, ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದರು.
ಸ್ವಾತಂತ್ರೊö್ಯÃತ್ಸವದ ಪ್ರಯುಕ್ತ ಅಗಸ್ಟ ೧೫ ರಂದು ಬೆ ೭.೩೦ ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ಜರುಗುವುದು. ನಂತರ ಬೆ.೯ ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಂದು ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ನಗರಸಭೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೂ ಸಹ ಸೂಕ್ತ ಆಸನದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು. ಕಾರ್ಯಕ್ರಮದ ದಿನ ತುರ್ತು ಸೇವೆಗಾಗಿ ಅಂಬುಲೆನ್ಸ್ನ ವ್ಯವಸ್ಥೆಗೆ ಕ್ರಮ ವಹಿಸಬೇಕು. ಒಟ್ಟಾರೆಯಾಗಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರೊö್ಯÃತ್ಸವ ಸಮಾರಂಭವನ್ನು ಅತ್ಯಂತ ಕಾಳಜಿಯಿಂದ ಆಸಕ್ತಿಯಿಂದ ಆಚರಿಸಲು ಕ್ರಮ ವಹಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರು ಮಾತನಾಡಿ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಕ್ಕೆ ಆಯಾ ಇಲಾಖಾಧಿಕಾರಿಗಳು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಸ್ವಾತಂತ್ರೊö್ಯÃತ್ಸವ ದಿನಾಚರಣೆಯನ್ನು ವಿಶೇಷ ಆಸಕ್ತಿಯಿಂದ ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು.
ಸಭೆಯಲ್ಲಿ ಎನ್‌ಸಿಸಿ ಅಧಿಕಾರಿ ಕರ್ನಲ್ ರೂಪೇಂದ್ರ ಸಿಂಗ್, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎ.ರಡ್ಡೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕುರ್ತಕೋಟಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸುಬೇದಾರ ಮೇಜರ್ ಮಲ್ಲಪ್ಪ ಬ್ಯಾಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.