ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ಕಮತಿ
ಹುಬ್ಬಳ್ಳಿ,ಜು೨೫: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾಗಿ ರಾಜಶೇಖರ ಕಮತಿ ಅವರನ್ನು ನೇಮಕ ಮಾಡಲಾಗಿದೆ.
ವಾರ್ಡ್ ಸಂಖ್ಯೆ ೪ರ ಸದಸ್ಯ ರಾಜಶೇಖರ ಕಮತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿ ಈ ಬಾರಿ ಧಾರವಾಡ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಈ ಹಿಂದೆ ವಿಪಕ್ಷ ನಾಯಕಿಯಾಗಿದ್ದ ಸುವರ್ಣ ಕಲ್ಲಕುಂಟ್ಲ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದೆ.