ಕರವೇ ಗುಂಡ್ಲುಪೇಟೆ ತಾಲೂಕು ಟೌನ್ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.೨೫-ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರು ಗುಂಡ್ಲುಪೇಟೆ ತಾಲೂಕು ಹಾಗೂ ಟೌನ್ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವೇದಿಕೆಯ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾಗಿ ರಮೇಶ್‌ನಾಯಕ, ಉಪಾಧ್ಯಕ್ಷರಾಗಿ ಕಾರ್ತಿಕ್, ಟೌನ್ ಅಧ್ಯಕ್ಷರಾಗಿ ರಾಜೇಂದ್ರ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವರನ್ನು ಸ್ಥಳೀಯ ಕಾರ್ಯಕರ್ತರು, ಮುಖಂಡರ ಸೂಚನೆ ಮೇರೆ ನೇಮಕ ಮಾಡಲಾಗಿದೆ ಎಂದರು.
ಹಿಂದೆ ವೇದಿಕೆಯ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾಗಿದ್ದ ಸುರೇಶ್ ನಾಯಕ ಸಂಘಟನೆ ಮಾಡುವಲ್ಲಿ ವಿಫಲರಾಗಿದ್ದರು. ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದರು ಎಂಬ ಸದಸ್ಯರು, ಪದಾಧಿಕಾರಿಗಳ ದೂರಿನ ಹಿನ್ನಲೆಯಲ್ಲಿ ಹಾಗೂ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಆದೇಶದ ಮೇರೆಗೆ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸುರೇಶ್ ನಾಯಕ ಸಂಘಟನೆಯ ಹೆಸರು ಬಳಸುವಂತಿಲ್ಲ. ಒಂದು ವೇಳೆ ಬಳಸಿಕೊಂಡರೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ.
ಸಂಘದ ನೂತನ ಪದಾಧಿಕಾರಿಗಳು ಸಂಘಟನೆಯಲ್ಲಿ ಮಾಡುವಲ್ಲಿ ಶ್ರಮಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮಂಜೇಶ್, ಪ್ರಧಾನ ಕಾರ್ಯದರ್ಶಿ ಆನಂತ್‌ನಾಗ್, ಗುಂಡ್ಲುಪೇಟೆ ಅಧ್ಯಕ್ಷ ರಮೇಶ್‌ನಾಯಕ, ಉಪಾಧ್ಯಕ್ಷ.. ಕಾರ್ತಿಕ್, ಟೌನ್ ಅಧ್ಯಕ್ಷ ರಾಜೇಂದ್ರ, ಉಪಾಧ್ಯಕ್ಷ ಕೃಷ್ಣಪ್ಪ ಹಾಜರಿದ್ದರು.