ಮ.ಮ ಬೆಟ್ಟದಲ್ಲಿ ಜಾತ್ರಾ ವಿಶೇಷ: ಪ್ರಾಧಿಕಾರದಿಂದ ಸಭೆ
ಸಂಜೆವಾಣಿ ವಾರ್ತೆ
ಹನೂರು ಸೆ 29 :– ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೈ ಮಹದೇಶ್ವಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಮಾವಾಸ್ಯೆ ದಸರಾ ಹಾಗೂ ದೀಪಾವಳಿ ಜಾತ್ರಾ ವಿಶೇಷ ಪ್ರಯುಕ್ತ ನಡೆಯುತ್ತಿರುವ ಜಾತ್ರಾ ವಿಶೇಷ ಮಹೋತ್ಸವದ ಅಂಗವಾಗಿ ಶಾಸಕ ಎಂಆರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಾಗಮಲೆ ಭವನದಲ್ಲಿ ನಡೆದ ಜಾತ್ರೆ ವಿಶೇಷ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಶಾಸಕ ಮಂಜುನಾಥ್ ಅವರು ಮಾತನಾಡಿ ಆರಾಧ್ಯ ದೈವ ಮಲೆ ಮಾದೇಶ್ವರನ ಬೆಟ್ಟಕ್ಕೆ ರಾಜ್ಯದ ಹಾಗೂ ವಿವಿಧ ಜಿಲ್ಲೆಗಳ ಮತ್ತು ತಮಿಳುನಾಡಿನಿಂದಲೂ ಲಕ್ಷಾಂತರ ಭಕ್ತರು ಧಾರ್ಮಿಕ ಕ್ಷೇತ್ರಕ್ಕೆ ಬಂದು ಹೋಗುವ ಮಾದಪ್ಪನ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಬರದಂತೆ ಅಧಿಕಾರಿಗಳು ಸಕಲ ಸೌಕರ್ಯಗಳನ್ನು ನೀಡುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಾತ್ರಾ ಹಾಗೂ ಹಬ್ಬದ ವಿಶೇಷ ದಿನಗಳಲ್ಲಿ ಮಲೆ ಮಾದೇಶ್ವರನ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಧಾರ್ಮಿಕ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆಯನ್ನು ಗುಣಮಟ್ಟದಿಂದ ನೀಡುವಂತೆ ಜೊತೆಗೆ ಸ್ವಚ್ಛತೆಗೂ ಸಹ ಆದ್ಯತೆ ನೀಡುವಂತೆ ಸಲಹೆ ನೀಡಿದರು ಭಕ್ತಾದಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆ ದೂರದಂತೆ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ: ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ದೇವರ ದರ್ಶನ ಸೌಲಭ್ಯ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಧಾರ್ಮಿಕ ಕ್ಷೇತ್ರದಲ್ಲಿ ಬರುವಂತಹ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಸಹ ಕಲ್ಪಿಸುವ ಮೂಲಕ ಕ್ರಮ ಕೈಗೊಳ್ಳಬೇಕು.
ಜೊತೆಗೆ ಆರಕ್ಷಕ ಠಾಣೆಯ ಮುಂಭಾಗ ರಸ್ತೆಯಲ್ಲಿ ಗಣ್ಯ ವ್ಯಕ್ತಿಗಳ ಮಹನ ಪಾರ್ಕಿಂಗ್ ಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು ತಮಿಳುನಾಡಿನಿಂದ ಬರುವ ಸಾರಿಗೆ ವಾಹನಗಳನ್ನು ಪಾಲಾರಸ್ತೆಯಲ್ಲಿರುವ ಪಾರ್ಕಿಂಗ್ ಮೈದಾನದಲ್ಲಿ ಸೌಲಭ್ಯ ಕಲ್ಪಿಸಿ ವ್ಯವಸ್ಥ ಕಲ್ಪಿಸಿ ಭಕ್ತಾದಿಗಳಿಗೆ ಲಘುವಾಹನಗಳಿಗೆ ಆಸ್ಪತ್ರೆ ಮುಂಭಾಗದಲ್ಲಿರುವ ಕಾಲಿ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಹೆಚ್ಚಿನ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿ: ಮಲೆ ಮಾದೇಶ್ವರನ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತಾದಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆ ಹೆಚ್ಚುವರಿ ಬಸ್ ಗಳನ್ನು ಹನೂರು ತಾಲೂಕು ಹಾಗೂ ಕೊಳ್ಳೇಗಾಲ ಗುಂಡ್ಲುಪೇಟೆ, ಮೈಸೂರು ವಿಭಾಗದಿಂದ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು ಆರೋಗ್ಯ ಇಲಾಖೆ ಸಹ ಹೆಚ್ಚುವರಿ ಆಂಬುಲೆಸನ್ ಗಳ ವ್ಯವಸ್ಥೆ ಕಲ್ಪಿಸಿ ಜಾತ್ರೆಯ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ಕಲ್ಪಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಬರುವ ಭಕ್ತಾದಿಗಳಿಗೆ ರಂಗಮಂದಿರ ಹವಾಮಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಾನಪದ ನೃತ್ಯ ರೂಪಕಗಳ ನಾಟಕ ಮತ್ತು ಇತ್ಯಾದಿ ಸಾಂಸ್ಕೃತಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ವಿಶೇಷ ವ್ಯವಸ್ಥೆ ಕಲ್ಪಿಸಬೇಕು ಬರುವಂತ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಪೆÇಲೀಸ್ ಇಲಾಖೆ ಸಕಲ ರೀತಿಯಲ್ಲಿಯೂ ಸೂಕ್ತ ಬಂದೋಬಸ್ತ್ ಕಲ್ಪಿಸುವ ಮೂಲಕ ಕ್ರಮ ಕೈಗೊಳ್ಳಬೇಕು.
ಜೊತೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಲಯ ಅಮಾವಾಸ್ಯೆ ದಸರಾ ಹಾಗೂ ದೀಪಾವಳಿ ಹಬ್ಬದ ಜಾತ್ರಾ ವಿಶೇಷ ದಿನಗಳಲ್ಲಿ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಬರದಂತೆ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಸಕಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪ್ರಾಧಿಕಾರದ ವತಿಯಿಂದ ನಡೆಯುವತ್ತಿರುವ ಅಬಿವೃದ್ಧಿ ಕಾಮಗಾರಿಗಳಾದ ದೀಪದಗಿರಿ ಒಡ್ಡಿನಿಂದ ನಡೆಯುತ್ತಿರುವ ಪೆವರ್ಸ್ ಗಳನ್ನೂ ಸಹ ಪರಿಶೀಲನೆ ನಡೆಸಿ ಗುಣಮಟ್ಟದ ನಿರ್ಮಿಸುವಂತೆ ಸೂಚಿಸಿದರು ಅದಲ್ಲದೆ ಪ್ರಾಧಿಕಾರದ ಅಬಿವೃದ್ಧಿ ಕಾಮಗಾರಿಯಾದ 508 ಕೊಠಡಿ ಕಾಮಗಾರಿಯನ್ನು ಶಾಸಕರು ಪರಿಶೀಲನೆ ನಡೆಸಿ ಗುಣಮಟ್ಟದ ಪೀಠೋಪ ಕರಣಗಳನ್ನು ಅಳವಡಿಸಲು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಜಗದೀಶ್,ಸಬ್ ಇನ್ಸ್ಪೆಕ್ಟರ್ ಬಸವರಾಜು,ಲೋಕೋಪಯೋಗಿ ಇಲಾಖೆ ಎ.ಇ.ಇ ಚಿನ್ನನ್ ,ವೈದ್ಯಾಧಿಕಾರಿ ಜಾನವಿ, ಗ್ರಾಮ ಪಂ ಅಬಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ , ಚೆಸ್ಕಾಂ ಜೆ ಇ ಮಹೇಶ್, ಕೆಎಸ್‍ಆರ್ಟಿಸಿ ಟಿಸಿ ಚಿನ್ನಪ್ಪ, ತಂಬಡಿ ನಾಗರಾಜ್, ನಾಗಣ್ಣ, ಮಹದೇವಸ್ವಾಮಿ, ಜನಾರ್ಧನ, ಮಾದೇಶ್ ಹಾಗೂ ಪ್ರಾಧಿಕಾರದ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.