ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಲಬುರಗಿ:ಜು.24:ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿAದ ವಿಮಾನದ ಮೂಲಕ ಜುಲೈ 27 ರಂದು ಶನಿವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು. ಮಧ್ಯಾಹ್ನ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ರಾತ್ರಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.