ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವು
ಕಲಬುರಗಿ,ಜು.24-ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಅಫಜಲಪುರ ತಾಲ್ಲೂಕಿನ ಉಡಚಾಣ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಅಂಬಾದಾಸ ತಂದೆ ಮಚೇಂದ್ರ (30) ಮೃತಪಟ್ಟ ಯುವಕ.
ಅಂಬಾದಾಸ ನಿನ್ನೆ ಮಧ್ಯಾಹ್ನ ಎಮ್ಮೆಗೆ ನೀರು ಕುಡಿಸಲು ಹೋದ ವೇಳೆ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದು, ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.