ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಕಾನ್ಸಸ್ಟೇಬಲ್
ವಿಜಯಪುರ,ಜು.24:ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪೊಲೀಸ್ ಕಾನ್ಸಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೊಲೀಸ್ ಕಾನ್ಸಸ್ಟೇಬಲ್ಸ್ ಹನುಮಂತ ಪೂಜಾರಿ,ಜಟ್ಟೆಪ್ಪ ಬಿರಾದಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ವಿಜಯಪುರ ನಗರದ ಗೋಲಗುಂಬಜ್ ಪೊಲೀಸ್ ಠಾಣೆಯ ಕಾನ್ಸಸ್ಟೇಬಲ್ಸ್ ಗಳು ಗಲಾಟೆಗೆ ಸಂಬAಧಿಸಿದ ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡುವ ವಿಚಾರದಲ್ಲಿ ಆರೋಪಿಗಳಿಂದ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆರೋಪಿತರು 40 ಸಾವಿರ ನಗದು ಲಂಚ ಪಡೆದಿದ್ದರು.
ಲೋಕಾಯುಕ್ತ ಅಧಿಕಾರಿಗಳು ಜಾಲ ಬೀಸಿ ಇಬ್ಬರು ಕಾನ್ಸಸ್ಟೇಬಲ್ಸ್ ಗಳನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ, ಡಿವೈಎಸ್ಪಿ ಸುರೇಶ ರೆಡ್ಡಿ, ಇನ್ಸ್ ಪೆಕ್ಟರ್ ಆನಂದ ಠಕ್ಕನವರ, ಎ.ಎ. ಡೋಣಿ ನೇತೃತ್ವದಲ್ಲಿ ದಾಳಿ ನಡೆಯಿತು.
ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.