ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್: ಆರ್.ಎಸ್. ಪಾಟೀಲ
ವಿಜಯಪುರ,ಜು.24:ಕೃಷಿ ಕ್ಷೇತ್ರಕ್ಕೆ 1.52 ಲಕ್ಷಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್‌ನಲ್ಲಿ ವ್ಯಕ್ತಪಡಿಸಲಾಗಿದೆ. ಈ ಬಜೆಟ್‌ನಲ್ಲಿ ಯುವಜನರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಆವರು ಪ್ರತಿಕ್ರಿಯಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ 4 ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸುವ ಭರವಸೆಯನ್ನು ಬಜೆಟ್‌ನಲ್ಲಿ ನೀಡಲಾಗಿದೆ. ಉದ್ಯೋಗ ಸೃಷ್ಟಿಗಾಗಿ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತು ್ತಆರೋಗ್ಯ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆಯನ್ನು ವಿತ್ತ ಸಚಿವರು ನೀಡಿದ್ದಾರೆ. ವಸತಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿದರು.