ಸರಕಾರಿ ಗೌರವಗಳೊಂದಿಗೆ ಮಾಜಿ ಶಾಸಕ ಮುದ್ನಾಳ ಅಂತ್ಯಕ್ರಿಯೆ
ಯಾದಗಿರಿ : ಜು. ೨೪ : ಅನಾರೋಗ್ಯದಿಂದ ಸೋಮವಾರ ನಿಧನರಾದ ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ ಅವರ ಅಂತ್ಯಕ್ರಿಯೆ ಸಕಲ ಪೋಲಿಸ್ ಗೌರವಗಳೊಂದಿಗೆ ಮಂಗಳವಾರ ಸ್ವಗ್ರಾಮದಲ್ಲಿ ನೆರವೇರಿತು.
ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಜಿಲ್ಲಾಧಿಕಾರಿ ಸುಶೀಲಾ.ಬಿ, ಪೋಲಿಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟಪ್ಪಗೊಳ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ, ಯಾದಗಿರಿ ತಹಸೀಲ್ದಾರ ಅಂತಿಮ ದರ್ಶನ ಪಡೆದು, ಸರಕಾರಿ ಗೌರವಗಳನ್ನು ಸಲ್ಲಿಸಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಣೆ ಮಾಡಲಾಯಿತು.