ಬಡವ, ಅನ್ನದಾತ, ಮಹಿಳೆ ಹಾಗೂ ಯುವಕರ ಬಜೆಟ್: ಸುಭಾಷ್ ಆರ್ ಗುತ್ತೇದಾರ
ಆಳಂದ:ಜು.೨೪:ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ೭ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದು ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ೩.೦ ಸರ್ಕಾರ ಮಂಡಿಸಿರುವ ಬಜೆಟ್ ವಿಕಸಿತ ಭಾರತಕ್ಕೆ ಪೂರಕವಾಗಿದೆ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ, ೨೦೨೪-೨೫ರಲ್ಲಿ ಅನ್ನದಾತ, ಬಡವ, ಯುವ ಹಾಗೂ ಮಹಿಳೆ ಸೇರಿದಂತೆ ೯ ಕ್ಷೇತ್ರಗಳಿಗೆ ಪ್ರಮುಖವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್‌ಎಸ್‌ಎಮ್‌ಇ ಕ್ಷೇತ್ರಗಳಿಗೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.
ಕೃಷಿಗೆ ಆದ್ಯತೆ, ಸಾಮಾಜಿಕ ನ್ಯಾಯ, ಉದ್ಯೋಗ, ಉತ್ಪಾದನೆ ಹಾಗೂ ಸೇವಾ ಕ್ಷೇತ್ರ ನಗರಾಭಿವೃದ್ಧಿ, ಮಹಿಳೆ, ಯುವಕರು ರೈತ, ಶಕ್ತಿಮೂಲಗಳು, ಸಂಶೋಧನೆ ಭವಿಷ್ಯದ ಸುಧಾರಣೆಗಳು ಈ ಬಜೆಟ್‌ನಲ್ಲಿವೆ. ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ ಅನುದಾನ ಮೀಸಲಿಡಲಾಗಿದ್ದು, ಸುಮಾರು ೪೦೦ ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ, ತರಕಾರಿ ಮಾರುಕಟ್ಟೆ ಆರಂಭ, ಕೃಷಿಯಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಆದ್ಯತೆ, ಎಣ್ಣೆ ಬೀಜ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಉತ್ತೇಜನ ಸೇರಿದಂತೆ ಅನೇಕ ಭರರಪೂರ ಕೊಡುಗೆ ನೀಡಿರುವುದು ಆಶಾದಾಯಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕ್ಷೇತ್ರ ವಲಯಕ್ಕೆ ಅನುಗುಣವಾಗಿ ಬಜೆಟ್ ಮಂಡನೆ ಮಾಡಿದ್ದಾರೆ. ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಇದರಲ್ಲೂ ವಿಶೇಷವಾಗಿ ಕೃಷಿಗೆ ಹೆಚ್ಚಿನ ಅನುದಾನ ನೀಡಿ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒಟ್ಟು ೧.೫೨ ಲಕ್ಷ ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದು ನುಡಿದಿದ್ದಾರೆ.
೫ ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ನಿರ್ಧಾರವನ್ನು ಈ ಬಜೆಟ್ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬAಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ ಎಂದು ಹೇಳಿದ್ದಾರೆ.
ಮುಂದಿನ ಒಂದು ವರ್ಷದಲ್ಲಿ ೧ ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದ್ದಾರೆ. ಹಾಗೂ ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್ನಲ್ಲಿ ಉಲ್ಲೇಖಿಸಿದ್ದಾರೆ. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ, ಮಾರುಕಟ್ಟೆಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿರುವುದು ರೈತರಿಗೆ ಖುಷಿ ಮೂಡಿಸಿದೆ ಎಂದಿದ್ದಾರೆ.