ಹಬೋಹಳ್ಳಿ :ನಾಳೆ  ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಜು.24 ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.25 ರಂದು ನಾಳೆ  ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ  ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪತಕರ್ತರ ಸಂಘದ ತಾಲೂಕ ಅಧ್ಯಕ್ಷ ಉಮಾಪತಿ ಶೆಟ್ಟರ್ ತಿಳಿಸಿದ್ದಾರೆ.       ಪಟ್ಟಣದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ ನೇಮಿರಾಜ್ ನಾಯ್ಕ್ ನೆರವೇರಿಸಲಿದ್ದಾರೆ. ವಿಶೇಷ  ಅಹ್ವಾನಿತಾರಾಗಿ ಸಂಸದ ಈ ತುಕಾರಾಂ ಹಾಗೂ ವಿಜಯನಗರ ಜಿಲ್ಲೆಯ ಪತ್ರಕರ್ತರ ಸಂಘದ ಅಧ್ಯಕ್ಷ ಪಿ ಸತ್ಯನಾರಾಯಣ ಪಾಲ್ಗೊಳ್ಳದಿದ್ದಾರೆ. ಕಾರ್ಯಕ್ರಮದ ಉಪನ್ಯಾಸವನ್ನು  ಎಂ.ಎಂ. ಶಿವಪ್ರಕಾಶ್ ಸಹಾಯಕ ಕುಲ ಸಚಿವರು ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರು ನೀಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಚಂದ್ರಶೇಖರ್ ಶಂಬಣ್ಣ ಗಾಳಿ, ತಾ ಪಂ ಇ ಒ ಡಾ. ಪರಮೇಶ್ವರಪ್ಪ, ಜೆಸ್ಕಾಂ ಇಲಾಖೆಯ ಇ ಇ ಹುಸೇನ್ ಸಾಬ್, ಪುರಸಭೆಯ ಮುಖ್ಯಾಧಿಕಾರಿ ಪ್ರಭಾಕರ್ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಸಮಾಜ ಕಲ್ಯಾಣ ಇಲಾಖೆಯ  ಸಹಾಯಕ ನಿರ್ದೇಶಕ ಆಂಜನೇಯ ಹೆಚ್ ಹುಲ್ಲಾಳ, ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಲಕ್ಷ್ಮಣ್, ಕಾನಿಪ ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ತಾಲೂಕಿನ ಎಲ್ಲಾ ಆಂಬುಲೆನ್ಸ್  ಚಾಲಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.