ವಿಶ್ವಕರ್ಮ ಮಹೋತ್ಸವ ರಾಜ್ಯಪಾಲರಿಗೆ ಆಹ್ವಾನ
ಬೆಂಗಳೂರು; ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ಸೆಪ್ಟಂಬರ್ ೨೭ ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿರುವ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ, ಶಿಲ್ಪಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಭಾಕರ್ ಐ.ಎ.ಎಸ್ (ನಿ), ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ ಎಂ ಉಮೇಶ್ ಕುಮಾರ್, ಉಪಾಧ್ಯಕ್ಷರಾದ ಎಸ್. ನಂಜುಂಡ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಕೆ. ಚಂದ್ರಶೇಖರ್ ಆಚಾರಿ ಅವರು ಆಹ್ವಾನ ನೀಡಿದರು.