ಕ್ರಿಕೆಟ್ ಬೆಟ್ಟಿಂಗ್ ನಿಯಂತ್ರಣಕ್ಕೆ ಮನವಿ
ಕೋಲಾರ,ಜು.೨೪:ಕೋಲಾರ ಜಿಲ್ಲಾದ್ಯಂತ ಕ್ರಿಕೆಟ್ ಬೆಟ್ಟಿಂಗ್ ಧಂದೆ ಹಾಗೂ ಡ್ರಗ್ಸ್ ದಂಧೆಯನ್ನು ನಿಷೇಧಿಸಲು ಸೂಕ್ತ ಕ್ರಮ ವಹಿಸುವಂತೆ ಭಾರತೀಯ ಜನತಾ ಪಾರ್ಟಿ ಕೋಲಾರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ ಅವರ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ದಂಧೆಯಲ್ಲಿ ಅನೇಕ ಯುವಕರು ವಿದ್ಯಾರ್ಥಿಗಳು ಭಾಗಿಯಾಗಿ ತಮ್ಮ ಅಮೂಲ್ಯವಾದ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅದೇ ರೀತಿ ನಮ್ಮ ಜಿಲ್ಲೆಯು ಗಡಿ ಭಾಗವಾಗಿರುವುದರಿಂದ ಹೊರ ರಾಜ್ಯಗಳಿಂದ ಗಾಂಜಾ ಬರುತ್ತಿದ್ದು, ಅದನ್ನು ಉಪಯೋಗಿಸಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದರ ಜೊತೆಗೆ ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಕೂಡಲೇ ತಾವು ಸೂಕ್ತ ಕ್ರಮ ವಹಿಸಿ ಯುವಕರನ್ನು ದಾರಿ ತಪ್ಪಿಸುತ್ತ ವ್ಯಾಪಕವಾಗಿ ನಡೆಯುತ್ತಿರುವ ಬೆಟ್ಟಿಂಗ್ ದಂದೆ ಡ್ರಗ್ಸ್ ಮತ್ತು ಗಾಂಜಾವನ್ನು ನಿಷೇಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.