ತ್ರೈಮಾಸಿಕ ಪರಿಶೀಲನಾ ಸಭೆ
ಕೋಲಾರ, ಜು,೨೪-ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಪ್ರಗತಿ ಕುರಿತು ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಒಂದನೇ ತ್ರೈಮಾಸಿಕ ಪರಿಶೀಲನಾ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್.ಹೊಸಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.