ಕೇಂದ್ರ ಬಜೆಟ್: ದೇಶ ನಿರೀಕ್ಷೆಗೂ ಮೀರಿ ಸಾಧನೆ

ಸಂಜೆವಾಣಿ ನ್ಯೂಸ್
ಮೈಸೂರು: ಜು.೨೪:- ಸರ್ವರ ಅಭಿವೃದ್ಧಿಗೆ ಪೂರಕವಾಗುವಂತಹ ಬಜೆಟ್ ಮಂಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ದೇಶ ನಿರೀಕ್ಷೆಗೂ ಮೀರಿ ಸಾಧನೆ ಮಾಡಲಿದೆ. ಎಲ್ಲ ವರ್ಗಗಳನ್ನೊಳಗೊಂಡ ಅಭಿವೃದ್ಧಿಗೆ ಹಣವನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹವಾಗಿದೆ. ದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವುದು ಸಂತಸದ ವಿಚಾರವಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.
ಈ ಮೂಲಕ ದೇಶದ ಆರ್ಥಿಕತೆಗೆ ಪೂರಕವಾಗಿದ್ದು, ನರೇಂದ್ರಮೋದಿ ಅವರ ನೇತೃತ್ವದಲ್ಲಿ ದೇಶ ಸಮಗ್ರ ಅಭಿವೃದ್ಧಿಯಡೆಗೆ ಸಾಗುವುದರಲ್ಲಿ ಯಾವುದೇ ಸಂಶುಂವಿಲ್ಲ. ಕೃಷಿ,ಕೈಗಾರಿಕೆ, ಆರೋಗ್ಯ,ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಉತ್ತಮವಾಗಿದೆ.