ಕೇಂದ್ರ ಸರ್ಕಾರದ ಬಜೆಟ್ ನಿರಾಸಾದಾಯಕ ಹಾಗೂ ರೈತ ವಿರೋಧಿ: ಬಿಕೆಆರ್
ಸಂಜೆವಾಣಿ ವಾರ್ತೆ
ಚಾಮರಾಜನಗರ. ಜು.೨೪- ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ನಿರಾಸಾದಾಯಕ ಹಾಗೂ ರೈತ ವಿರೋಧಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಟೀಕಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗಾಗಿ ಯಾವುದೇ ಹೊಸ ಹೊಸ ಯೋಜನೆಗಳಿಲ್ಲ ಕೇವಲ ಅವರ ಮೂಗಿಗೆ ತುಪ್ಪ ಸವರುವ ಕೆಲಸವಾಗಿದೆ. ದೇಶದಲ್ಲೇ ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯವಾಗಿರುವ ಕರ್ನಾಟಕಕ್ಕೆ ಯಾವುದೇ ಯೋಜನೆಗಳನ್ನು ನೀಡದೆ ಮಲತಾಯಿ ಧೋರಣೆ ತೋರಿದ್ದಾರೆ. ತಮ್ಮ ಮಿತ್ರ ಪಕ್ಷಗಳ ಹಿತ ಕಾಪಾಡಿ, ಕುರ್ಚಿ ಉಳಿಸಿಕೊಳ್ಳಲು ಬಿಹಾರ್ ಆಂಧ್ರ ಪ್ರದೇಶಗಳಿಗೆ ಹೆಚ್ಚು ಅನುದಾನ ನೀಡಿದೆ.
ಸುಮಾರು ೧೯ ಸಂಸದರನ್ನು ಹೊಂದಿರುವ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಈ. ಬಗ್ಗೆ ಪ್ರಶ್ನಿಸುವ ದೈರ್ಯ ತೋರಬೇಕಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಬಿ.ಕೆ. ರವಿಮಾರ್ ಕರ್ನಾಟಕವನ್ನು ಬಿಜೆಪಿ ಕೇವಲ ಓಟ್ ಬ್ಯಾಂಕ್‌ಗಾಗಿ ಇಟ್ಟುಕೊಂಡಿದೆ ಎಂದು ಅವರು ಟೀಕಿಸಿದ್ದಾರೆ.
ಉದ್ಯೋಗ ಸೃಷ್ಟಿಗೆ ಗಂಭೀರ ಪ್ರಯತ್ನ ನಡೆಸಿಲ್ಲ ಬಡತನ ರೇಖೆಗಿಂತ ಕೆಳಗಿರುವುದನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ರವಿಕುಮಾರ್ ಟೀಕಿಸಿದ್ದಾರೆ.