ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜು.೨೪: ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಗ್ರೇಡ್-೨ ತಹಶೀಲ್ದಾರ್ ಲೋಕೇಶ್ ಸಮ್ಮುಖದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ ನಮನ ಸಲ್ಲಿಸಲಾಯಿತು.
ತಾಲ್ಲೂಕು ನಯನಜ ಕ್ಷತ್ರಿಯ ಸಮಾಜದ ಅಧ್ಯಕ್ಷ ಶಿವಪ್ಪ ಮಾತನಾಡಿ ಬಸವಣ್ಣನವರ ನೇತೃತ್ವದಲ್ಲಿ ೧೨ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರು ಪ್ರಮುಖ ಪಾತ್ರವಹಿಸಿದ್ದರು. ಅವರ ತತ್ವ, ಆದರ್ಶ ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಹಸನಾಗುತ್ತದೆ. ಅಪ್ಪಣ್ಣನವರ ಜೀವನ, ತತ್ವ, ಸಿದ್ದಾಂತಗಳನ್ನು ಎಲ್ಲರಿಗೂ ತಿಳಿಸಲು ಜಯಂತಿಯನ್ನು ಆಚರಿಸಲಾಗುತ್ತಿದೆ. ಶರಣರ ವಚನಗಳನ್ನು ಆದರ್ಶವಾಗಿಟ್ಟುಕೊಂಡು ಬದುಕು ರೂಪಿಸಿಕೊಳ್ಳಬೇಕು. ಅಪ್ಪಣ್ಣನವರು ಒಬ್ಬ ಸೇವಾಯೋಗಿ, ಕಾಯಕನಿರತ ಶರಣರಾಗಿದ್ದಾರೆ. ಅಂಥಹ ಮಹಾನ್ ಶರಣರು ನಡೆದು ಬಂದ ದಾರಿಯಲ್ಲಿ ಸಾಗಿದರೆ ಜೀವನ ಸಾರ್ಥಕ ಸಾರ್ಥಕವಾಗುತ್ತದೆ. ಅವರ ಸ್ಮರಣೆಗೂ ಅರ್ಥಪೂರ್ಣತೆ ಸಿಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಗ್ರೇಡ್-೨ ತಹಶೀಲ್ದಾರ್ ಲೋಕೇಶ್, ನಯನಜ ಕ್ಷತ್ರಿಯ ಸಮಾಜದ ಮುಖಂಡರಾದ ಸವಿತಾಸಮಾಜದ ಅಧ್ಯಕ್ಷ ಸಂತೇಬಾಚಹಳ್ಳಿಮಂಜುನಾಥ್, ಉಪಾದ್ಯಕ್ಷ ಎಂ.ಕೆ.ಶೇಖರ್, ಹೆಚ್.ಕೆ.ಸಿದ್ದರಾಜು, ಕಾರ್ಯಾದ್ಯಕ್ಷ ಪಾಪಣ್ಣ, ಲೆಕ್ಕಪರಿಶೋಧಕ ವಸಂತಕುಮಾರ್, ಶಿಕ್ಷಣ ಸಂಯೋಜಕಿ ನೀಲಾಮಣಿ, ಆರೋಗ್ಯ ನಿರೀಕ್ಷಕ ಸತೀಶ್ ಸೇರಿದಂತೆ ಹಲವರಿದ್ದರು.