ತಂಬಾಕು ಮುಕ್ತ ಶಾಲೆಗಳನ್ನು ಮಾಡಿ ನಿಯಮಾನುಸಾರ ನಾಮಫಲಕಗಳನ್ನು ಅಳವಡಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚನೆ
ಕಲಬುರಗಿ,ಜು.23:ಶಿಕ್ಷಣ ಇಲಾಖೆಯು ಪ್ರತಿ ಮಾಹೆಯ ೨೫ ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನು ಮಾಡಿ ಸದರಿ ಶಾಲೆಗಳ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳು ನಿಯಮಾನುಸಾರ ನಾಮಫಲಕಗಳನ್ನು ಅಳವಡಿಸಿ ಒಟ್ಟು ೩೬೧೯ ಶಾಲೆಗಳಿದ್ದು ಅದರಲ್ಲಿ ೫೦೦ ಶಾಲೆಗಳು ಮಾತ್ರ ತಂಬಾಕು ಮುಕ್ತ ಶಾಲೆಗಳೆಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸಮೀಕ್ಷಣಾ ಘಟಕ ,ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕುರಿತು ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಬರುವ ಎಲ್ಲಾ ಬಾರ & ರೆಸ್ಟೊರೆಂಟರ್‌ಗಳಲ್ಲಿ ಹಾಗೂ ಕಡ್ಡಾಯವಾಗಿ ನಾಮಫಲಕ ಅಳವಡಿಸಿ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಕೆಲಸದ ಸ್ಥಳ, ಸರಕಾರಿ ಕಛೇರಿಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ (ಅಔಖಿPಂ) ಕಾಯ್ದೆ ೨೦೦೩ ರ ಸೆಕ್ಷನ್ ೦೪ ರಡಿಯಲ್ಲಿ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ.ಸುರೇಶ ಮೇಕಿನ ಮಾತನಾಡಿ, ತಂಬಾಕು ಮಾರಾಟ ಮಾಡಲು ಲೈಸನ್ಸ್ ಅತ್ಯಗತ್ಯ. ೧೯೧೫ ಸರ್ಕಾರಿ ಇಲಾಖೆಗಳಲ್ಲಿ ಕೇವಲ ೧೪ ಇಲಾಖೆಗಳು ಮಾತ್ರ ತಂಬಾಕು ಮುಕ್ತಾ ಇಲಾಖೆಗಳಾಗಿವೆ ಮತ್ತು ತಂಬಾಕು ಮಾರಾಟ ನಿಯಂತ್ರಣ ಮಾಡಲು ಎಲ್ಲಾ ಇಲಾಖೆಗಳು ಸಹಕರಿಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು ಹಾಗೂ ತಂಬಾಕು ಕುರಿತು ಸಾರ್ವಜಿಕರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿವರ್ಗದವರು ಜಾಗೃತಿ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಮದ್ಯ ಮಳಿಗೆಗಳಲ್ಲಿ ಹಾಗೂ ಇನ್ನಿತರ ಮಳಿಗೆಗಳಲ್ಲಿ ಸಿಗರೇಟ್ ಮತ್ತು ತಂಬಾಕು ಮಾರಾಟ ಮಾಡಲು ಸರÀಕಾರದಿಂದ ಲೈಸನ್ಸ್ ಗಳನ್ನು ಪಡೆದುಕೊಳ್ಳಬೇಕೆಂದು ಎಲ್ಲ ಸಂಬAಧ ಪಟ್ಟ ಅಧಿಕಾರಿಗಳಿಗೆ ಹಾಗೂ ತಂಬಾಕು ಉತ್ಪಗಳನ್ನು ಮಾರಾಟ ಮಾಡದಂತೆ ಕೋಟ್ಪಾ ದಾಳಿ ಮಾಡುವಂತೆ ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿಗಳ ಗಮನಕ್ಕೆ ತರಲು ಅವರಿಗೆ ಸಭೆಯಲ್ಲಿ ತಿಳಿಸಿದರು.
ಆರೋಗ್ಯ ಇಲಾಖೆಯಿಂದ ಪ್ರತಿಯೊಂದು ಬಿ ಹೆಚ್ ಓ ಮತ್ತು ಸಿ ಹೆಚ್ ಓ ಇವರ ಕೆಳಗಡೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ತಂಬಾಕು ಬಗ್ಗೆ ಮಾಹಿತಿ ಮತ್ತು ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರು ಸುಜಾತಾ ಪಾಟೀಲ್ ಮತ್ತು ಸಮಾಜ ಕಾರ್ಯಕರ್ತರು ಆರತಿ ಧನಶ್ರೀ ಅವರು ಹಾಗೂ ಸಂಬAಧ ಪಟ್ಟ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.