ಕಾರು ಡಿಕ್ಕಿ: ಬೈಕ್ ಸವಾರ ಸಾವು
ಕಲಬುರಗಿ,ಜು.23-ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಮನಬಾದ್ ರಸ್ತೆಯ ತಾರವಗೇರಾ ಸಮೀಪದ ಧಾಬಾ ಹತ್ತಿರ ನಡೆದಿದೆ.
ಮೃತನನ್ನು ನಗರದ ಇಸ್ಲಾಮಾಬಾದ್ ಕಾಲೋನಿಯ ಫೈಜಾನ್ ಖಲೀಲ್ ಅಹ್ಮದ್ (19) ಎಂದು ಗುರುತಿಸಲಾಗಿದೆ. ತಿಹಾಮ್ ಖಾಲೀದ್ (19) ಎಂಬಾತನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಹುಮನಾಬಾದ ಮಾರ್ಗವಾಗಿ ಕಲಬುರಗಿ ಕಡೆಗೆ ಬರುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಖಲೀಲ್ ಅಹ್ಮದ್ ಅವರು ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.