ಗ್ರಾಮೀಣ ಜನರ ಅನುಕೂಲಕ್ಕೆ ಸುಸಜ್ಜಿತ ಸಭಾಂಗಣ ನಿರ್ಮಾಣ
ವಿಜಯಪುರ.ಜು೨೩:ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಸುಸಜ್ಜಿತ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಕನ್ವೆನ್ ಷನ್ ಹಾಲ್ ಹಾಗೂ ಶಂಕರ ಸದನ ನಿರ್ಮಾಣ ಮಾಡಿರುವುದು ಒಳ್ಳೆಯ ಕೆಲಸವೆಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಕನ್ವೆನ್ ಷಲ್ ಹಾಲ್ ಹಾಗೂ ಶ್ರೀ ಶಂಕರ ಸದನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಕನ್ವೆನ್ ಷಲ್ ಮಾಲೀಕ ಅಂಬರೀಶ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ನಮ್ಮ ಭವನದಲ್ಲಿ ಯಾವುದೇ ಶುಭ ಸಮಾರಂಭಗಳನ್ನು ಮಾಡಲು ಎಲ್ಲರಿಗೂ ಅನುಕೂಲಕರವಾದ ವಾತಾವರಣವನ್ನು ನಿರ್ಮಾಣ ಮಾಡಿದ್ದು ಗ್ರಾಮೀಣ ಜನತೆ ಹಾಗೂ ಪಟ್ಟಣದ ಜನತೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕೆ.ಪಿ.ಸಿ.ಸಿ ಕಾರ್ಯದರ್ಶಿ ವಿ.ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಪುರಸಭಾ ಸದಸ್ಯ ನಾರಾಯಣಸ್ವಾಮಿ, ಹನೀಫ್ ಹುಲ್ಲ, ಮುನಿನಾರಯಣಪ್ಪ, ಸೀನಪ್ಪ, ಸಂಧ್ಯಾ ಅಂಬರೀಶ್ ಹಾಗೂ ಮುಖಂಡರು ಹಾಜರಿದ್ದರು.