ವಿಶ್ವ ರೇಬಿಸ್ ದಿನಾಚರಣೆ
ಕಲಬುರಗಿ:ಸೆ.28: ನಗರದ ಶೇಖರೋಜಾದಲ್ಲಿರುವ ಶಹಾಬಜಾರ ‘ನಗರ ಪ್ರಾಥಮಿಕ ಆರೋಗ್ಯ ಕೇಂದ’್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಶನಿವಾರ ‘ವಿಶ್ವ ರೇಬಿಸ್ ದಿನಾಚರಣೆ’ ಜರುಗಿತು.
ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ರೇಬಿಸ್ ಬಗ್ಗೆ ಜಾಗೃತಿ ಮಾತುಗಳನ್ನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ರೇಶ್ಮಾ ನಕ್ಕುಂದಿ, ಜಗನಾಥ ಗುತ್ತೇದಾರ, ನಾಗೇಶ್ವರಿ ಮುಗಳಿವಾಡಿ, ಮಂಗಲಾ ಚಂದಾಪುರೆ, ನಾಗಮ್ಮ ಚಿಂಚೋಳಿ ಸೇರಿದಂತೆ ಮತ್ತಿತರರಿದ್ದರು.