ಅ. 2 ರಂದು ಮಹಾತ್ಮಾ ಗಾಂಧೀಜಿ ಜಯಂತಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ:ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ
ಕಲಬುರಗಿ:ಸೆ.28: ಜಿಲ್ಲಾಡಳಿತದಿಂದ ಅಕ್ಟೋಬರ್ 2 ರಂದು ಮಹಾತ್ಮಾಗಾಂಧೀಜಿ ಜಯಂತಿಯನ್ನು ಅದ್ದೂರಿಯಾಗಿ ಅಚರಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 27 ರಂದು ಜರುಗಿದ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಲಬುರಗಿ ಮಹಾನಗರ ಪಾಲಿಕೆ, ಭಾರತ ಸೇವಾದಳ ಜಿಲ್ಲಾ ಸಮಿತಿ ಕಲಬುರಗಿ ಇವರುಗಳು ಸಂಯುಕ್ತಾಶ್ರಯದಲ್ಲಿ ಜರುಗಿಸಲಾಗುವುದು ಎಂದು ತಿಳಿಸಿದರು.
ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಟೌನ್ ಹಾಲಿನಲ್ಲಿರುವ ಗಾಂಧೀಜಿ ಪ್ರತಿಮೆ ಮೊದಲು ಗಣ್ಯವ್ಯಕ್ತಿಗಳಿಂದ ಮಾಲಾರ್ಪಣೆ ಮಾಡಿ ಡಾ. ಎಸ್. ಪಂಡಿತ ರಂಗಮಂದಿರದಲ್ಲಿ 9.15 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ, ಅಪರ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ಶಾಲಾಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಂದು ನಡೆಯುವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆ ತರುವ ವ್ಯವಸ್ಥೆ ಮಾಡಲು ಸೂಚಿಸಿದರು.