ಸೇವಾ ಮನೋಭಾವ ಬೆಳೆಸಿಕೊಳ್ಳಿ
ಬಾಗಲಕೋಟೆ,ಜು23: ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಸೇವಾ ಮನೋಭಾವವನ್ನು ಬೆಳೆಸಿಕೊಂಡು ರಚನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಸಮುದಾಯದ ಪಾತ್ರ ದೊಡ್ಡದು. ಅವರು ತಮ್ಮ ಶಕ್ತಿ-ಸಾಮಥ್ರ್ಯವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಪರಿಸರ ಸ್ವಚ್ಛತೆ, ಶ್ರಮದಾನದಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಚ್.ಜಿ.ಗೌಡರ ಮಾತನಾಡಿ ದೈನಂದಿನ ಚಟುವಟಿಕೆಗಳಲ್ಲಿ ಹಾಗೂ ಏಳು ದಿನಗಳ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುವುದರ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಇನ್ನೋರ್ವ ಕಾರ್ಯಕ್ರಮಾಧಿಕಾರಿ ಎನ್.ಬಿ.ಹಸಬಿ ಸ್ವಾಗತಿಸಿದರು. ಉಪನ್ಯಾಸಕ ವಾಯ್.ಎಚ್.ಗುಡೂರ ವಂದಿಸಿದರು. ಇದಕ್ಕೂ ಮೊದಲು, ವಿದ್ಯಾರ್ಥಿಗಳು ಶ್ರಮದಾನ ಮತ್ತು ಸ್ವಚ್ಛತಾಕಾರ್ಯದಲ್ಲಿ ಪಾಲ್ಗೊಂಡರು.