ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು
ಕಲಬುರಗಿ,ಜು.22-ಇದೇ ತಿಂಗಳ 2 ರಂದು ನಗರದ ಹೈಕೋರ್ಟ್ ಹತ್ತಿರ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪಿಎ ವಿಜಯಕುಮಾರ ಅವರ ಪುತ್ರ ವಿನಯಕುಮಾರ ಹಿರೇಮಠ (30) ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳದಿದ್ದಾನೆ.
ಜು.2 ರಂದು ಹೈಕೋರ್ಟ್ ಹತ್ತಿರ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವಿನಯಕುಮಾರ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.