ನಿಗದಿಪಡಿಸಿದ ಸಮಯಕ್ಕೆ ಬೆಳೆಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ:ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ, ಜು.22: ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಈಗಾಗಲೇ ಗುರುತಿಸಲಾದ ಪಿ.ಆರ್. ರವರೊಂದಿಗೆ ನಿಗಧಿಪಡಿಸಿದ ದಿನಾಂಕದೊಳಗಾಗಿ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಯುವ ಬೆಳೆಗಳಿಗೆ ಬೆಳೆ ವಿಮೆ ಮಾಡಿಸುವಂತೆ ರೈತರಲ್ಲಿ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ವತಿಯಿಂದ ಗ್ರಾಮಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು 2024ನೇ ಜುಲೈ.31 ರೊಳಗಾಗಿ ಬೆಳೆ ವಿಮೆ ಮಾಡಿಸಲು ರೈತರಿಗೆ ತಿಳಿಸಬೇಕೆಂದು ಹೇಳಿದರು.
ಭಾರಿ ಮಳೆಯಿಂದ ಬೆಳೆ ಹಾನಿ, ಮಾನವ ಹಾಗೂ ಪ್ರಾಣಿ ಜೀವ ಹಾನಿ, ಮನೆ ಹಾನಿ ಸಂಭವಿಸಿದ್ದಲ್ಲಿ ಸಂಬಂಧಪಟ್ಟ ತಹಸೀಲ್ದಾರರು ಕೂಡಲೆ ನನ್ನ ಗಮನಕ್ಕೆ ತರಬೇಕು ಹಾಗೂ ರಸ್ತೆ, ಅಂಗನವಾಡಿ, ಶಾಲಾ ಕಟ್ಟಡಗಳು ಹಾಳಾಗಿದಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಭಾರಿ ಮಳೆ ಸಂಭವಿಸುವ ಮುನ್ನಸೂಚನೆಯಿದ್ದಲ್ಲಿ ಮಾಂಜ್ರಾ ನದಿಯ ದಂಡೆಗೆ ಇರುವ ಗ್ರಾಮಗಳ ಜನರಿಗೆ ನದಿಯ ತಿರದಲ್ಲಿ ಹೋಗದಂತೆ ಸಂಬಂಧಪಟ್ಟ ಗ್ರಾಮಗಳಲ್ಲಿ ಡಂಗೂರ ಮೂಲಕ ಗ್ರಾಮಸ್ಥರಿಗೆ ತಿಳಿಸುವುದು, ಧನೆಗಾಂಗ,ಕಾರಂಜಾ ಡ್ಯಾಮನಿಂದ ನೀರು ಹರಿಸಿದಲ್ಲಿ ನದಿ ತೀರದಲ್ಲಿ ಇರುವ ಗ್ರಾಮಗಳ ಮನೆಗಳಲ್ಲಿ ನೀರು ನುಗ್ಗುವ ಸಂಭವಿರುವ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮುನ್ನೆಚರಿಕೆ ನೀಡಿ ಗಂಜಿ ಕೇಂದ್ರಗಳನ್ನು ಗುರುತಿಸಿ ಅಗತ್ಯವಿದ್ದಲ್ಲಿ ಗ್ರಾಮಸ್ಥರಿಗೆ ಸ್ಥಳಾಂತರಿಸಲು ತಹಸೀಲ್ದಾರರು ಕ್ರಮವಹಿಸಬೇಕು.
ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಮತ್ತು ಕೆರೆಗಳಲ್ಲಿ ಸಾರ್ವಜನಿಕರು ನೀರಿನಲ್ಲಿ ಇಜುವುದನ್ನು ನಿಷೇಧಿಸಿರುವ ಕುರಿತು ಮುನ್ನೇಚ್ಚರಿಕೆ ಫಲಕಗಳನ್ನು ಅಳವಡಿಸುವುದು ಮತ್ತು ಭಾರಿ ಮಳೆ ಸಂಭವಿಸಿದ್ದಲ್ಲಿ ಸಾರ್ವಜನಿಕರು ಜಲಶಯ ಮತ್ತು ಕೆರೆಗಳು ವೀಕ್ಷಿಸಲು ಹೋಗದಿಂತೆ ಕೆಎನ್‍ಎನ್‍ಎನ್‍ಎಲ್ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕ್ರಮ ವಹಿಸಬೇಕೆಂದು ಅವರು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ. ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಾದ ಸಲೀಂ ಪಾಶಾ ಸೇರಿದಂತೆ. ಕೃಷಿ ಇಲಾಖೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.