ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರಮದಾನ
ಕಲಬುರಗಿ,ಜು.22: ರವಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರಮದಾನ ನಡೆಯಿತು. ಅಧಿಕಾರಿ ಸಿಬ್ಬಂದಿಯೆಲ್ಲರು ಕಸಗೂಡಿಸಿ ಸ್ವಚ್ಚತಾ ಕಾರ್ಯಕ್ಕೆ ಕೈಜೋಡಿಸಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಕಚೇರಿ ಎಲ್ಲಾ ಸಿಬ್ಬಂದಿ ವರ್ಗ ಕೈಯಲ್ಲೊ ಪೆÇರಕೆ ಹಿಡಿದು ಕಚೇರಿ ಆವರಣ, ಮೊದಲನೇ ಮಹಡಿಯಲ್ಲಿನ ಕಾರಿಡರ್ ಸ್ವಚ್ಚಗೊಳಿಸಿದರು.
ಶಾಲಾ ಶಿಕ್ಷಣ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಚುನಾವಣಾ ತಹಶೀಲ್ದಾರ ಪಂಪಯ್ಯ ಸೇರಿದಂತೆ ಅನೇಕ ಸಿಬ್ಬಂದಿ ಸ್ವಚ್ಚತಾ ಕಾರ್ಯದಲ್ಲಿ ಭಾಗಿಯಾಗಿದ್ದರು.