ಸ್ಪಿಂಕ್ಲರ್ ಪೈಪುಗಳು ಸಂಪೂರ್ಣ ಕಳಪೆ
ಕೊಲ್ಹಾರ:ಸೆ.28: ರಾಜ್ಯದ ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸುತ್ತಿರುವ ಸ್ಪಿಂಕ್ಲರ್ ಪೈಪುಗಳು ಸಂಪೂರ್ಣ ಕಳಪೆ ಮಟ್ಟದ್ದಾಗಿದ್ದು, ಕಳಪೆ ಮಟ್ಟದ ಪೈಪುಗಳು ಉತ್ಪಾದನಾ ಕಂಪನಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವುದಲ್ಲದೆ ಅಂತಹ ಕಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಸ್ ಅವರಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ರೈತರ ನಿಯೋಗ ಮನವಿ ಸಲ್ಲಿಸಿತು. ಅಲ್ಲದೆ ರಾಜ್ಯದ ರೈತರ ಜಮೀನುಗಳ ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ವಿಠ್ಠಲ್ ಬಿರಾದಾರ, ಹನುಮಂತ್ರಾಯ ಹಂದ್ರಾಳ, ಅಂಬರೀಷ್ ಚಿಕ್ಕ ಮಠ ಹಾಗೂ ಇನ್ನಿತರರು ಇದ್ದರು