ಹರಪನಹಳ್ಳಿ;ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಜು.೨೨: ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ  ತಾಲೂಕ ಆಡಳಿತ ವತಿಯಿಂದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಆಚರಿಸಲಾಯಿತು.ಈ ವೇಳೆ ಹಡಪದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ತಹಶೀಲ್ದಾರ್ ಬಿ.ವಿ.ಗಿರೀಶ್‌ಬಾಬು, ಗ್ರೇಡ್-2 ತಹಶೀಲ್ದಾರ್ ನಟರಾಜ, ಶಶಿಕುಮಾರ, ಗೌರಮ್ಮ, ಸಮಾಜದ ಮುಖಂಡರಾದ ಶಾಂತಪ್ಪ, ದ್ವಾರಕೀಶ, ಬಸವರಾಜಪ್ಪ ಸೇರಿದಂತೆ ಇತರರು ಇದ್ದರು.