ರಾಜ್ಯ ಮಟ್ಟದ ಪ್ರಶಸ್ತಿ
ಲಕ್ಷ್ಮೇಶ್ವರ,ಜು.21:ಪಟ್ಟಣದ ಮಕ್ಕಳ ಸಾಹಿತಿ ಚಿಂತಕ ನಿವೃತ್ತ ಶಿಕ್ಷಕರಾದ ಪೂರ್ಣಾಜಿ ಕರಾಟೆಯವರಿಗೆ ಬೆಂಗಳೂರಿನ ದೊಡ್ಡಬಳ್ಳಾಪುರದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಮಟ್ಟದ ಕಾರ್ಯಕ್ರಮ ಪ್ರಶಸ್ತಿ ನೀಡಿ ಗೌರವಿಸಿದೆ.
ಇತ್ತೀಚೆಗೆ ಬೀದರ್ನಲ್ಲಿ ಜರುಗಿದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪರಿಷತ್ತಿನ ಅಧ್ಯಕ್ಷರು ಡಾ. ಸುಧಾಕರ್ ನಟರಾಜ ಅವರ ನೇತೃತ್ವದಲ್ಲಿ ಜರುಗಿದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಳೆದ ನಾಲ್ಕು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿರುವ ಕರಾಟೆಯವರು ವೃತ್ತಿಯಿಂದ ಶಿಕ್ಷಕರಾಗಿ ನಂತರ ಕೃಷಿಕರಾಗಿ ಉದ್ಯಮಿಗಳಾಗಿ ಗುರುತಿಸಿಕೊಂಡಿದ್ದಾರೆ. ಪೂರ್ಣಾಜಿ ಕರಾಟೆ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಲಭಿಸಿದ್ದಕ್ಕೆ ಲಕ್ಷ್ಮೇಶ್ವರ ತಾಲೂಕ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗರಾಜ ಹಣಗಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷರಾದ ಈಶ್ವರ ಮೆಡ್ಲೇರಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಸವರಾಜ್ ಬೆಟಗೇರಿ ನ್ಯಾಯವಾದಿ ಬಸವರಾಜ ಬಾಳೇಶ್ವರ ಮಠ ವೀರಣ್ಣ ಪವಾಡದ ಸೋಮಣ್ಣ ಡಾಣಗಲ್ಲ ಅಶೋಕ್ ಸೊರಟೂರ ಅಭಿನಂದಿಸಿದ್ದಾರೆ.