ಗುರಿ ಮತ್ತು ಶಿಸ್ತು ಅಳವಡಿಸಿಕೊಂಡರೆ ಯಶಸ್ಸು: ಮಂಜು
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜು.21: ವಿದ್ಯಾರ್ಥಿಗಳು ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಂಡು ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಯಶಸ್ಸುಗಳಿಸಬಹುದು ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.
ಅವರು ತಾಲ್ಲೂಕಿನ ಶೀಳನೆರೆ ಗ್ರಾಮದಲ್ಲಿ ನಿರಂತರ ಫೌಂಡೇಶನ್ ಸಂಸ್ಥೆಯ ವತಿಯಿಂದ ಪ್ರೌಡಶಾಲೆ ಹಾಗೂ ಕಾಲೇಜಿಗೆ ಕಂಪ್ಯೂಟರ್ ಹಾಗೂ ಎರಡು ಪೆÇ್ರಜೆಕ್ಟರ್ ಸಾಮಗ್ರಿಗಳನ್ನು ಹಸ್ತಾಂತರಿಸಿ ಮಾತನಾಡಿದರು.
ನಿರಂತರ ಫೌಂಡೇಷನ್ ಸಂಸ್ಥೆಯು ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸಹಕಾರ ನೀಡುತ್ತಾ ಬಂದಿರುವುದು ಒಳ್ಳೆಯ ಬೆಳವಣಿಗೆ. ಒಂದು ಸರ್ಕಾರ ಮಾಡಲಾಗದ ಕೆಲಸವನ್ನು ಸ್ವಯಂಸೇವಾ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ. ಹಲವಾರು ವ್ಯಕ್ತಿಗಳು ಒಗ್ಗೂಡಿ ಒಂದು ಸಂಸ್ಥೆಯನ್ನು ಸ್ಥಾಪಿಸಿ ಅವರ ದುಡಿಮೆಯ ಸ್ವಲ್ಪ ಭಾಗದ ಹಣವನ್ನು ಈ ರೀತಿಯ ಸಮಾಜಸೇವಾ ಕಾರ್ಯಗಳಿಗೆ ಬಳಕೆ ಮಾಡುತ್ತಿರುವುದು ಅಭಿನಂದನಾರ್ಹ. ಅವರ ಬದ್ದತೆ, ಜವಾಬ್ದಾರಿಗಳು ಎಷ್ಟು ಎಂಬುದು ಅವರ ಮಾತುಗಳಿಂದಲೇ ತಿಳಿಯುತ್ತದೆ. ಸರ್ಕಾರಿ ಶಾಲೆಗಳನ್ನು ಇಂಥಹ ಸ್ವಯಂಸೇವಾ ಸಂಸ್ಥೆಗಳು ಬೆಂಬಲಿಸಿದರೆ ಸರ್ಕಾರಿ ಶಾಲೆಗಳು ಬಲವರ್ಧನೆಯಾಗುತ್ತವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶೋತ್ತರಗಳನ್ನ ಈಡೇರಿಸುತ್ತಿರುವ ನಿರಂತರ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ. ಮಕ್ಕಳೂ ಇವರು ನೀಡುತ್ತಿರುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಶ್ರದ್ದೆಯಿಂದ ಅಭ್ಯಾಸ ಮಾಡುವ ಮೂಲಕ ಕಾಲೇಜಿಗೆ ಮತ್ತು ಪೆÇೀಷಕರಿಗೆ, ನಾಡಿಗೆ ಕೀರ್ತಿ ತರುವ ಕೆಲಸವನ್ನು ಮಾಡಬೇಕು ಎಂದರು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು ಕಾಲೇಜಿಗೆ ಆಗಬೇಕಾದ ಕೆಲಸಗಳ ಬಗ್ಗೆ ಮನವಿ ಮಾಡಿದರು ಇದಕ್ಕೆ ಸ್ಪಂಧಿಸಿದ ಶಾಸಕರು ಕಾಲೇಜು ಕಟ್ಟಡಕ್ಕೆ ಮೇಲ್ಛಾವಣಿಗಾಗಿ ಹತ್ತು ಲಕ್ಷ ರೂಪಾಯಿಗಳನ್ನು ಹಾಗೂ ತುರ್ತು ರಿಪೇರಿ ಕೆಲಸ ಮಾಡಿಸಿ ಕೊಡಲಾಗುವುದು ಎಂದರು.
ನಿರಂತರ ಸಂಸ್ಥೆಯ ಶಿವಕುಮಾರ್ ಮಾತನಾಡಿ 2006-07 ಸಾಲಿನಲ್ಲಿ ಆರಂಭವಾದ ನಿರಂತರ ಫೌಂಡೇಶನ್ ಸಂಸ್ಥೆ ಹಲವಾರು ವ್ಯಕ್ತಿಗಳ ದುಡಿಮೆಯ ಶ್ರಮದ ಪ್ರತಿಫಲದಿಂದ ಕಟ್ಟಿದ ಸಂಸ್ಥೆಯಾಗಿದೆ.
ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಣ, ಆಹಾರ, ಚಿಗುರು, ವಸ್ತ್ರ ಮುಂತಾದ ಹೆಸರಿನಲ್ಲಿ ನೈಜ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಅರ್ಹ ಸವಲತ್ತುಗಳನ್ನು ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ನಿಮ್ಮ ಜೀವನವನ್ನು ನೀವೇ ರೂಪಿಸಿಕೊಳ್ಳಲು ಶ್ರಮಿಸಬೇಕು. ಇಂದು ನೀವು ಮಾಡಿದ ಕೆಲಸ ಮಾತ್ರ ನಿಮ್ಮದು ನಾಳೆ ಯಾರದೋ ಎಂಬ ಅರಿವು ನಿಮ್ಮಲ್ಲಿ ಇರಬೇಕು. ನಿಮ್ಮ ಶ್ರಮ ನಿಮ್ಮ ಯಶಸ್ಸಿನ ಮೆಟ್ಟಿಲಾಗಬೇಕು. ಆದ್ದರಿಂದ ನಿರಂತರ ಶ್ರಮ ಮತ್ತು ಶಿಸ್ತು ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ನಿರಂತರ ಸಂಸ್ಥೆಯ ಜಗದೀಶ್, ರಾಜ್ಯ ಮಾರಾಟ ಮಹಾ ಮಂಡಳಿಯ ನಿರ್ದೇಶಕ ಎಸ್.ಎಲ್.ಮೋಹನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾದ್ಯಕ್ಷ ಪ್ರಸನ್ನ, ಗ್ರಾಪಂ ಸದಸ್ಯ ಸಿದ್ದೇಶ್, ಕಾಲೇಜಿನ ಪ್ರಾಂಶುಪಾಲ ಎಂ.ಕೆ.ವಾಸು, ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ನೀಲಮ್ಮ, ಎಸ್.ಡಿ.ಎಂಸಿ ಅಧ್ಯಕ್ಷ ಶಿವರಾಮು, ಎಂಡಿಸಿಸಿ ಬ್ಯಾಂಕ್ ಉದ್ಯೊಗಿ ಸೋಮಣ್ಣ, ಪ್ರಕಾಶ್, ಹಾಗೂ ಕಾಲೇಜಿನ ಉಪನ್ಯಾಸಕರು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.