ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂದಾಯ ನೌಕರರ ಧರಣಿ ಸತ್ಯಾಗ್ರಹ
ವಿಜಯಪುರ,ಸೆ.28:ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಂದಾಯ ನೌಕರರು ಕಪ್ಪು ಬಟ್ಟೆ ಪ್ರದರ್ಶಿಸಿ ಧರಣಿ ಸತ್ಯಾಗ್ರಹ ನಡೆಸಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನೇತೃತ್ವದಲ್ಲಿ ಕಂದಾಯ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಕೈಗೊಂಡು ಮುಷ್ಕರ ನಡೆಸಿದರು.
ಕÀರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷÀ ಗಂಗಾಧರ ಜೂಲಗುಡ್ಡ ಮಾತನಾಡಿ, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ನೌಕರರ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವಂತೆ ಒತ್ತಾಯಿಸಿದರು.
ಕೆ.ಸಿ.ಎಸ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಮೆಮೋ ಹಾಕುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡಬೇಕು. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರ.ದ.ಸ/ರಾ.ನಿ ಹುದ್ದೆಗಳಿಗೆ ತಕ್ಷಣವೇ ಪದೊನ್ನತಿ ನೀಡುವುದು. ಅಂತರ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಪ್ರಕ್ರಿಯೆಗೆ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು ಇವೇ ಮುಂತಾದ ಬೇಡಿಕೆಗಳ ಈಡೇರಿಸಲು ಅವರು ಆಗ್ರಹಿಸಿದರು.
ಕಂದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷÀ ಜಿ.ಎಸ್. ರಾಜಾಪೂರ ಮಾತನಾಡಿ, ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿμÉೀಧಿಸಬೇಕು. ಆಹಾರ ಇಲಾಖೆಯ ಕೆಲಸಗಳನ್ನು ಕಂದಾಯ ಇಲಾಖೆಗೆ ನಿರ್ವಹಿಸಲು ಆದೇಶಿಸುತ್ತಿರುವುದರಿಂದ ಈ ಹಿಂದಿನಂತೆ ಆಹಾರ ಇಲಾಖೆಯ ಆಹಾರ ನಿರೀಕ್ಷಕರು ಹುದ್ದೆಗೆ ಪದೋನ್ನತಿಯನ್ನು ನೀಡಬೇಕು. ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಬೇಕು. ಮಾತೃ ಇಲಾಖೆಯ ಎಲ್ಲಾ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ. ಅತಿವೃಷ್ಟಿ, ಅನಾವೃಷ್ಟಿ, ಇನ್ನಿತರ ಗುರುತರವಾದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿದ್ದು, ಅರಣ್ಯ ಇಲಾಖೆ ಹಾಗೂ ಪೆÇೀಲಿಸ್ ಇಲಾಖೆಯಲ್ಲಿರುವಂತೆ 3000 ರೂಗಳನ್ನು ಆಪತ್ತಿನ ಭತ್ಯೆ (ರಿಸ್ಕ್ ಅಲೊಯನ್ಸ್) ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಅಧ್ಯಕ್ಷ ಸುರೇಶ ಶೇಡಶ್ಯಾಳ, ಖಜಾಂಚಿ ಜುಬೇರ ಕೆರೂರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ನಜೀರ ಇನಾಮದಾರ, ಪ್ರಧಾನ ಕಾರ್ಯದರ್ಶಿ ಜಿ.ಪಿ. ಡೊಂಬಳೆ, ಗೌರವ ಅಧ್ಯಕ್ಷ ಸಚ್ಚಿದಾನಂದ ತೇರದಾಳ, ಪ್ರಧಾನ ಕಾರ್ಯದರ್ಶಿ ರಿಯಾಜ ನಾಯ್ಕೋಡಿ ಮತ್ತಿತರರು ಉಪಸ್ಥಿತರಿದ್ದರು.