ಗಾಂಧಿಜೀ-ಲಾಲ್ ಬಹದ್ದೂರ್ ಶಾಸ್ತಿçÃ ಜಯಂತಿ ಸಂಭ್ರಮ
ವಾಡಿ:ಅ.೬: ಸಮೀಪದ ಲಾಡ್ಲಾಪುರ ಗ್ರಾಪಂ ವ್ಯಾಪ್ತಿಯ ಕೊಂಚೂರು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಸಹ ಶಿಕ್ಷಕ ಅಯ್ಯಣಪ್ಪ ಪೂಜಾರಿ ಮಾತನಾಡಿ, ಸತ್ಯ ಶಾಂತಿ, ತ್ಯಾಗಮೂರ್ತಿಯಾದ ಇವರ ಜೀವನಾರ್ದಶ ನಮಗೆ ಸ್ಪೂರ್ತಿಯಾಗಿದೆ. ಮಾಜಿ ಪ್ರಧಾನಿ ಲಾಲ್ ಬಹದೂರ್ ಶಾಸ್ತೀ ಅವರು ನೀಡಿದ ಜೈ ಜೈವಾನ್ ಜೈ ಕಿಸಾನ್ ಘೋಷವಾಕ್ಯ ರೈತ ಹಾಗೂ ಸೈನಿಕರ ಬಗೆಗಿನ ಅಪಾರ ಕಾಳಜಿಗೆ ಧ್ಯೋತಕವಾಗಿದೆ ಎಂದು ಹೇಳಿದರು.
ವಸತಿ ಶಾಲೆಯ ಪ್ರಾಂಶುಪಾಲ ಸುನಿಲ್ ಕುಮಾರ್ ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಹ ಶಿಕ್ಷಕರಾದ ಬಾಲಸ್ವರೂಪ, ಸ್ವಾöಂಯಲಿ, ಕಾಂಚನ, ಪ್ರೀತಿ, ಕಮಲಾಕ್ಷಿ, ನಿಲಯ ಪಾಲಕಿ ಪಾರ್ವತಿ ಕೊಟಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.