ಸೇಡಂದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆಆರು ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ
ಕಲಬುರಗಿ:ಜು.20:ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕಲಬುರಗಿ ಇವುಗಳ ಸಹಯೋಗದಲ್ಲಿ 2024-25ನೇ ಸಾಲಿನ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 6 ದಿನಗಳ ಕಾಲ ಸೇಡಂದಲ್ಲಿ ಹಮ್ಮಿಕೊಳ್ಳಲಾದ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಇತ್ತೀಚೆಗೆ ಭೇಟಿ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕ ಜಿ ಯು ಹುಡೇದ, ಅವರು ಮಾತನಾಡಿ, 6 ದಿನಗಳ ಅವಧಿಯ ತರಬೇತಿಯಲ್ಲಿ ಸಾಧನಾ ಪ್ರೇರಣಾ ತರಬೇತಿ, ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ, ಉದ್ದಿಮೆಯನ್ನು ಆಯ್ಕೆ ಮಾಡುವ ವಿಧಾನ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಸಮೀಕ್ಷೆ ಮಾಡುವ ವಿಧಾನ ಬ್ಯಾಂಕ್ ವ್ಯವಹಾರಗಳು, ಉದ್ಯಮ ಸ್ಥಾಪನೆಗೆ ಇರುವ ಸಾಲ ಸೌಲಭ್ಯಗಳು ಮತ್ತು ಇತರ ಸಂಬಂಧಪಟ್ಟ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.