ಜಿಲ್ಲಾಧಿಕಾರಿಗಳ ಭೇಟಿ: ಪರಿಶೀಲನೆ
ಲಕ್ಷ್ಮೇಶ್ವರ,ಜು20: ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರು ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ತಹಶೀಲ್ದಾರ್ ಕಚೇರಿ ಮತ್ತು ಪುರಸಭೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ಪುರಸಭೆಯಲ್ಲಿ ವಿವಿಧ ಕಾಮಗಾರಿಗಳ ಮತ್ತು 14ನೇ ಹಣಕಾಸು ಹಾಗೂ ನಗರುತ್ತಾನ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅರ್ಧಮರ್ಧ ಕಾಮಗಾರಿಗಳ ಬಗ್ಗೆ ಗುತ್ತಿಗೆದಾರರಿಗೆ ಕೊಡದೆ ಕ್ರಮ ಕೈಗೊಳ್ಳುವಂತೆ ಸೂಚಿಸುವಂತೆ ಇಂಜಿನಿಯರ್ ಗಳಿಗೆ ಹೇಳಿದರು.
ಪುರಸಭೆಯಲ್ಲಿ ನೂತನ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಹೊಸ ತಾಲೂಕುಗಳ ಘೋಷಣೆಯ ನಂತರ ತಹಶೀಲ್ದಾರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಮಾತ್ರ ನೇಮಿಸಲಾಗಿದೆ ಎಲ್ಲ ಕಚೇರಿಗಳು ಆರಂಭವಾಗಲು ಸರ್ಕಾರ ನಿರ್ಣಯ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಸುದ್ದಿಗಾರರು ನಗರದಲ್ಲಿ ನಗುರಥಾನ ಕಾಮಗಾರಿಗಳ ವಿಳಂಬದ ಕುರಿತು ಪ್ರಶ್ನಿಸಿದಾಗ ಕೂಡಲೇ ಗುತ್ತಿಗೆದಾರನ್ನು ಕರೆಯಿಸಿ ಕಾಮಗಾರಿ ಆರಂಭಿಸುವಂತೆ ಮುಖ್ಯ ಅಧಿಕಾರಿಗಳಿಗೆ ಮತ್ತು ಇಂಜಿನಿಯರ್ ಗಳಿಗೆ ಸೂಚಿಸಿದರು ಅಲ್ಲದೆ ಪಟ್ಟಣದಲ್ಲಿ ಕೈಗೊಂಡಿರುವ ಒಳಚರಂಡಿ ಯೋಜನೆ ಕಾಮಗಾರಿ ಅಪೂರ್ಣವಾಗಿದ್ದು ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ನಗರ ನೀರು ಸರಬರಾಜು ಮತ್ತು ಒಳಚಂಡಿ ಮಂಡಳಿಗೆ ಸೂಚಿಸುವಂತೆ ಹಾಗೂ ಮೇವುಂಡಿಯಿಂದ ನಗರಕ್ಕೆ ನೀರು ಪೂರೈಸುವ ಪೈಪುಗಳು ಸಂಪೂರ್ಣ ಹಾಳಾಗಿದ್ದು ಅವುಗಳ ಕುರಿತು ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿಗಳ ಗಮನ ಸೆಳೆಯಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ವೆಂಕಟೇಶ ನಾಯಕ ತಹಶೀಲ್ದಾರ್ ವಾಸುದೇವ ವಿ. ಸ್ವಾಮಿ ಮುಖ್ಯ ಅಧಿಕಾರಿ ಮಹೇಶ ಹಡಪದ ಕಾರ್ಯಪಾಲಕ ಅಭಿಯಂತರದ ಶರಣಪ್ಪ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಶ್ಯಾಮಲಾ ಕಂದಾಯ ಅಧಿಕಾರಿ ಶಿವಾನಂದ್ ಅಜ್ಜಣ್ಣವರ ಪುರಸಭೆಯ ಸಿಬ್ಬಂದಿ ಇದ್ದರು.