ವಿವಿಗಳ ಶಿಕ್ಷಣ ಗುಣಮಟ್ಟ ಕುಸಿತ
ಸಂಜೆವಾಣಿ ನ್ಯೂಸ್
ಮೈಸೂರು: ಜು.20:- ನುರಿತ ಪ್ರಾಧ್ಯಾಪಕರು ಇಲ್ಲದೆ ಹೋದರೆ ವಿಶ್ವವಿದ್ಯಾನಿಲಯಗಳ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪೆÇ್ರ.ಎನ್.ಕೆ.ಲೋಕನಾಥ್ ತಿಳಿಸಿದರು.
ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿವಿಯ ಭೂಗೋಳಶಾಸ್ತ್ರ ಅಧ್ಯಯನ ವಿಭಾಗ, ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಶುಕ್ರವಾರ ಆಯೋಜಿಸಿದ್ದ ಪೆÇ್ರ.ಎಚ್.ನಾಗರಾಜ್ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯಕ್ಕೆ ನುರಿತ ಪ್ರಾಧ್ಯಾಪಕರ ಅವಶ್ಯಕತೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ನುರಿತ ಪ್ರಾಧ್ಯಾಪಕರ ಸಂಖ್ಯೆ ಕಡಿಮೆಯಾಗುತ್ತಿದೆ. ಇದು ಹೆಚ್ಚಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭೂಗೋಳ ಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪೆÇ್ರ.ಎಚ್.ನಾಗರಾಜ್ ಮತ್ತು ದೇವಿಕಾ ದಂಪತಿಯನ್ನು ಸನ್ಮಾನಿಸಲಾಯಿತು. ಚಿತ್ರದುರ್ಗದ ಅಖಿಲ ಭಾರತ ಶ್ರೀ ಕೃಷ್ಣಯಾದವ ಮಹಾಸಂಸ್ಥಾನ ಸುಕ್ಷೇತ್ರದ ಕೃಷ್ಣಯಾದವಾನಂದ ಸ್ವಾಮೀಜಿ, ಬೆಂಗಳೂರು ಉತ್ತರ ವಿವಿ ಕುಲಪತಿ ಪೆÇ್ರ.ನಿರಂಜನ ವಾನಳ್ಳಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ, ಪೆÇ್ರ.ಎಚ್.ನಾಗರಾಜ್ ಅಭಿನಂದನಾ ಸಮಿತಿ ಅಧ್ಯಕ್ಷ ಪೆÇ್ರ.ಎಸ್.ಅರುಣ್ ಕುಮಾರ್, ಗೌರವಾಧ್ಯಕ್ಷ ಪೆÇ್ರ.ಸಿ.ಚೌಡಯ್ಯ, ಉಪಾಧ್ಯಕ್ಷ ಪೆÇ್ರ.ಬಿ.ಚಂದ್ರಶೇಖರ ಮತ್ತು ಪೆÇ್ರ.ಪಿ.ಜಯಶ್ರೀ ಹಾಜರಿದ್ದರು.