ಬಾಲ್ಯವಿವಾಹ ತಡೆಯಲು ಎಲ್ಲರ ಸಹಕಾರ ಅಗತ್ಯ: ಉಮ್ಮತ್ತೂರು ಇಂದು ಶೇಖರ್
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.20- ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳು ದೈಹಿಕ, ಮಾನಸಿಕ ಹಾಗೂ ಬೌದ್ದಿಕವಾಗಿ ಶೋಷಣೆಗೆ ಒಳಗಾಗುತ್ತಿರುವುದರಿಂದ ಭವಿಷ್ಯ ಕುಂಠಿತಗೊಳ್ಳಲಿದ್ದು. ಇದನ್ನು ತಡೆಯುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಅವರು ಹೇಳಿದರು.
ತಾಲೂಕಿನ ಅಮಚವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಆರಿವುಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯದಲ್ಲಿಯೇ ಮದುವೆ ಮಾಡುವುದು ಅಪರಾಧ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳನ್ನು ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗಂಡು ಮಕ್ಕಳ ವಿವಾಹ ಮಾಡುವುದು ಬಾಲ್ಯ ವಿವಾಹ ನಿμÉೀಧಕಾಯ್ದೆ 2006ರ ಪ್ರಕಾರ ಅಪರಾಧವಾಗಲಿದೆ. ಇದರಿಂದ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುವುದರ ಜೊತೆಗೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಲಿದೆ ಎಂದರು.
ವಿದ್ಯಾರ್ಥಿಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಯಾವುದೇದೌರ್ಜನ್ಯ ವಾಗದಂತೆಜಾಗೃತರಾಗಿ, ಸಮಾಜದಇತರರಿಗುದೌರ್ಜನ್ಯ ಪ್ರಕರಣಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಇಂದು ಶೇಖರ್ ಅವರು ತಿಳಿಸಿದರು.
ಕಾಲೇಜಿನಉಪನ್ಯಾಸಕ ಸುರೇಶ್‍ಎನ್. ಋಗ್ವೇದಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು, ಈ ಕಾನೂನುಗಳ ಆರಿವು ಪಡೆದು ಸದುಪಯೋಗ ಹೊಂದಬೇಕು ಎಂದರು.
ಹಿರಿಯ ವಕೀಲರಾದ ವಿದ್ಯಾಲತಾ ಅವರು ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಹೆಣ್ಣುಗಂಡುಇಬ್ಬರು ಸಮಾನರು. ವಿದ್ಯಾರ್ಥಿಜೀವನದÀ ಭವಿಷ್ಯ ರೂಪಿಸಿಕೊಳ್ಳಲು ಇದು ಸಕಾಲ. ವಿದ್ಯಾರ್ಥಿಗಳು ಪ್ರೀತಿ ಪ್ರೇಮದ ಆಕರ್ಷಣೆಗೆ ಒಳಗಾಗಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದೆ ಓದಿನ ಕಡೆ ಗಮನಹರಿಸಿ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು. ತಂದೆ ತಾಯಿ ಕಂಡ ಕನಸುಗಳನ್ನು ಸಾಕಾರಗೊಳಿಸಬೇಕೆಂದು ತಿಳಿಸಿದರು.
ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯಟಿ.ಜೆ. ಸುರೇಶ್ ಅವರು ಮಾತನಾಡಿ ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ಜಾಗೃತರಾಗಿ ಹೆಜ್ಜೆಇಡಬೇಕು. ಕೆಟ್ಟ ಆಲೋಚನೆಯಿಂದ ದೂರವಿದ್ದು, ಒಳ್ಳೆಯದರ ಕಡೆ ಗಮನ ಹರಿಸಿ ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಆರ್. ಮೂರ್ತಿಅವರು ವಿದ್ಯಾರ್ಥಿಗಳು ಪಾಠ ಪ್ರವಚನದಜೊತೆಗೆ ಕಾನೂನಿನ ಅರಿವು ಪಡೆದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾರ್ವಜನಿಕಗ್ರಂಥಾಲಯಇಲಾಖೆಯ ಸಹಾಯಕ ಗ್ರಂಥಪಾಲಕ ಶಿವಕುಮಾರ್, ಉಪನ್ಯಾಸಕರಾದ ಪಿ. ಶಿವಸ್ವಾಮಿ, ಆರ್. ಬಸವಣ್ಣ, ಬಿ.ಎನ್. ರಮೇಶ್, ಸುರೇಶ್‍ಯುವ ಸ್ಪಂದನಕೇಂದ್ರದ ಪರಿವರ್ತಕಗುರುರಾಜ್, ಇತರರು ಕಾರ್ಯಕ್ರಮದಲ್ಲಿ ಇದ್ದರು.