ನಿರ್ಮಲಾನಂದನಾಥ ಶ್ರೀಗಳ ಹುಟ್ಟುಹಬ್ಬ: ಹಣ್ಣು ಹಂಪಲು ವಿತರಣೆ
ಮಾಲೂರು,ಜು.೨೦-ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ೫೫ನೇ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಒಕ್ಕಲಿಗರ ಸಂಘ ನೌಕರರ ಸಂಘ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿಯವರ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರ ಹಾಗೂ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜಿಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಪಿ.ಬೈಯಣ್ಣ ಆದಿಚುಂಚನಗಿರಿ ಮಠದ ಇಂದಿನ ಪೀಠಾಧಿಪತಿಗಳಾದ ಬಾಲಗಂಗಾಧರನಾಥ ಸ್ವಾಮೀಜಿಯವರ ಆಶೀರ್ವಾದದಿಂದ ಈಗಿನ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಮಠವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದು ಶಿಕ್ಷಣ ಆರೋಗ್ಯ ಸಾಮಾಜಿಕ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಮಠದಲ್ಲಿ ಶಿಕ್ಷಣ ಪಡೆದ ಲಕ್ಷಾಂತರ ಮಂದಿ ಪ್ರಸ್ತುತ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ. ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿಯವರಿಗೆ ದೇವರು ಆರೋಗ್ಯ ಆಯಸ್ಸು ನೀಡಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದರ ಮೂಲಕ ಸಮಾಜಕ್ಕೆ ಮಾರ್ಗದರ್ಶಕರಾಗಿ ದಾರಿದೀಪವಾಗಿ ಸೇವೆ ಸಲ್ಲಿಸಲಿ ಎಂದು ಹಾರೈಸಿದರು.
ನಿರ್ಮಲಾನಂದನಾಥ ಸ್ವಾಮೀಜಿ ಅಭಿಮಾನಿ ಬಳಗದ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ಸ್ವಾಮೀಜಿಯವರು ಆರೋಗ್ಯಕ್ಕಾಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ತೆರೆದು ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಅಲ್ಲದೆ ಮಠದಲ್ಲಿ ವಿದ್ಯಾರ್ಥಿ ನಿಲಯ ಪ್ರಾರಂಭಿಸಿ ಅನ್ನ ದಾಸೋಹ ಶಿಕ್ಷಣವನ್ನು ನೀಡುವುದರ ಮೂಲಕ ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ ದೇವರು ಅವರಿಗೆ ಹೆಚ್ಚಿನ ಆಯಸ್ಸು ಆರೋಗ್ಯ ನೀಡಲಿ ಸಮಾಜದ ಉನ್ನತಿಗಾಗಿ ಮತ್ತಷ್ಟು ಶ್ರಮಿಸಲಿ ಎಂದು ಶುಭ ಹಾರೈಸಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಮರಾಜೇಶ್ ವಕ್ಕಲಿಗರ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ತಿಮ್ಮರಾಯಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಮಕೃಷ್ಣಪ್ಪ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿಎಂ ವಿಜಯ್ ಕುಮಾರ್ ಬಿಜಿಎಸ್ ಪ್ರಾಂಶುಪಾಲ ತಿಮ್ಮರಾಯಪ್ಪ ನಿರ್ಮಲಾನಂದನಾಥ ಸ್ವಾಮೀಜಿ ಅಭಿಮಾನಿಗಳಾದ ಶ್ರೀನಿವಾಸ್ ವೇಣುಗೋಪಾಲ್ ಸಂಪತ್ ಸಾಂಬಾರ್ ಮಂಜು ಮುನಿರಾಜು ಅಶೋಕ್ ಮದಕರಿ ಮಧು ನಂಜೇಗೌಡ ಹಾಜರಿದ್ದರು.