ವಿಜಯಪುರದ ಸ್ಮಾರಕಗಳು ಪ್ರವಾಸಿಗರ ಆಕರ್ಷಣೀಯ ತಾಣ: ಸಂಗಮೇಶ ಬಬಲೇಶ್ವರ
ವಿಜಯಪುರ,ಸೆ.28: ಇಲ್ಲಿನ ಪ್ರವಾಸಿ ತಾಣಗಳು ದೇಶ, ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಸ್ಮಾರಕಗಳ ರಕ್ಷಣೆಯ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ, ಸಿಕ್ಯಾಬ್ ಇನ್ಸ್ಟಿಟ್ಯೂಷನ್ ಹಾಗೂ ಹೋಟೆಲ್ ಅಸೋಸಿಯೇಶನ್ ಇವರ ಸಹಯೋಗದಲ್ಲಿ ಶುಕ್ರವಾರ ಗೋಳಗುಮ್ಮಟ ಆವರಣದಲ್ಲಿ ಪ್ರವಾಸೋದ್ಯಮ ಮತ್ತು ಶಾಂತಿ ಘೋಷವಾಕ್ಯದಡಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತಿಹಾಸದ ಘಟನೆ ಹಾಗೂ ಸ್ಮಾರಕಗಳ ಬಗ್ಗೆ ಅಧ್ಯಯನ ಮಾಡಿ ಅವುಗಳ ಮಹ್ವತವನ್ನು ಅರಿಯಬೇಕು. ನಮ್ಮ ರಾಜ್ಯದಲ್ಲಿ ಹಲವಾರು ಸ್ಮಾರಕ, ಪ್ರವಾಸಿ ಸ್ಥಳಗಳ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಉಪನ್ಯಾಸ ನೀಡಿದ ಮುಸ್ತಾಕ್‍ಮಹ್ಮದ್ ಇನಾಮದಾರ, ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿಯಾಗುವುದಲ್ಲದೆ, ಸ್ಥಳೀಯ ಕರಕುಶಲ ಕಲೆ, ಸಾಂಸ್ಕøತಿಕ ಪರಿಚಯ ಉಂಟಾಗುತ್ತದೆ ಎಂದು ಹೇಳಿದರು.
ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕÀ ಮಲ್ಲಿಕಾರ್ಜುನ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ವರ್ಷದ ಉತ್ತಮ ಪ್ರವಾಸಿ ಮಾರ್ಗದರ್ಶಕ ಎಂದು ಜಹಾಂಗೀರ್ ಅವರನ್ನು, ಪ್ರವಾಸಿ ಮಿತ್ರ ಎಂದು ಡಿ.ಜೆ. ಪತ್ತಾರ ಅವರನ್ನು ಹಾಗೂ ಚಿತ್ರಕಲಾ ಸ್ಪರ್ಧೆ ಭಾಷಣ ಸ್ಪರ್ಧೆ, ರಸಪ್ರಶ್ನೆ, ಸ್ತÀ್ಥಬ್ಧಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಪೆÇೀಟೋಗ್ರಾಫಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜಯಪುರದ ಐತಿಹಾಸಿಕ ಪ್ರವಾಸಿ ತಾಣಗಳ ಭಾವಚಿತ್ರಗಳ ಪ್ರದರ್ಶನ ಹಾಗೂ ಪ್ರವಾಸಿ ತಾಣಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೆಳಕು ಚೆಲ್ಲುತ್ತಿರುವ ಕಂಟೆಂಟ್ ಕ್ರೀಯೆರ್ಸ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೇಯರ ಮಹೇಜಬಿನ್ ಹೊರ್ತಿ, ಉಪ ಮೇಯರ್ ದಿನೇಶ ಹಳ್ಳಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ ವಿಜಯಕುಮಾರ ದೋಣಿ, ಮಹೇಶ ಕ್ಯಾತನೂರ, ಆರತಿ ಪಾಟೀಲ, ಡಿ.ಪಿ. ಜಾಧವ ಸೇರಿದಂತೆ ಎಎಸ್‍ಐ ಸಿಬ್ಬಂದಿ, ಟೂರಿಸ್ಟ್ ಗೈಡ್, ಬಂಗಾರಮ್ಮ ಸಜ್ಜನ ಕಾಲೇಜು, ಸಿಕ್ಯಾಬ್ ಇನ್‍ಸ್ಟಿಟ್ಯೂಶನ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.